ರಾಜ್ಯ

Bidadi Township: 7,481 ರಿಂದ 9,600 ಎಕರೆ ಸ್ವಾಧೀನಕ್ಕೆ ಸಂಚು, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು

ಬಿಡದಿ ಭಾಗದಲ್ಲಿ ನೀರಾವರಿ ಮತ್ತು ಕೃಷಿಯೋಗ್ಯ ಫಲವತ್ತಾದ ಭೂಮಿ, ರಿಯಲ್ ಎಸ್ಟೇಟ್ ಉದ್ದೇಶದ ಟೌನ್ ಶಿಪ್ ಯೋಜನೆಗೆ ಕಸಿದುಕೊಳ್ಳುವುದು ಅಕ್ಷ್ಯಮ್ಯ. ರೈತ ವಿರೋಧಿ ಟೌನ್ ಶಿಪ್ ಯೋಜನೆಯನ್ನು ಸರಕಾರ ಸ್ಥಗಿತಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ದೂರನ್ನು ಸಲ್ಲಿಸಿತು.

Bidadi Township: 7,481 ರಿಂದ 9,600 ಎಕರೆ ಸ್ವಾಧೀನಕ್ಕೆ ಸಂಚು, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು
ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು
Published On :

ಬೆಂಗಳೂರು: ರಾಜ್ಯ ಸರಕಾರ ಟೌನ್ ಶಿಪ್ ನೆಪದಲ್ಲಿ ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಯ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುವುದನ್ನು ವಿರೋಧಿಸಿ, ಜೆಡಿಎಸ್ ನಿಯೋಗದಿಂದ ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಕೂಡಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಡಬೇಕೆಂದು ಒತ್ತಾಯಿಸಿತು.‌

ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷರಾದ ಹೆಚ್.ಎಂ. ರಮೇಶ್ ಗೌಡ ಅವರ ನೇತೃತ್ವದಲ್ಲಿ ಮುಖ್ಯ ಕಾರ್ಯದರ್ಶಿ ಅವರನ್ನು ಭೇಟಿಯಾದ ಪಕ್ಷದ ನಿಯೋಗವು, ಸರಕಾರ ಮೊದಲ ಹಂತದಲ್ಲಿ ಸುಮಾರು 498 ಎಕರೆಗೂ ಹೆಚ್ಚು ಫಲವತ್ತಾದ ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದು, ಈ ಪೈಕಿ 614 ಅಂದರೆ ಶೇ. 81 ರಷ್ಟು ರೈತರು ಸಣ್ಣ ಮತ್ತು ಅತೀಸಣ್ಣ ಹಿಡುವಳಿದಾರರಾಗಿದ್ದು, ಸುಮಾರು 750 ಕುಟುಂಬಗಳು ಬೀದಿಪಾಲಾಗುತ್ತಿವೆ ಎಂದು ಮಾಹಿತಿ ನೀಡಿತು.

ಬಿಡದಿ ಭಾಗದಲ್ಲಿ ನೀರಾವರಿ ಮತ್ತು ಕೃಷಿಯೋಗ್ಯ ಫಲವತ್ತಾದ ಭೂಮಿ, ರಿಯಲ್ ಎಸ್ಟೇಟ್ ಉದ್ದೇಶದ ಟೌನ್ ಶಿಪ್ ಯೋಜನೆಗೆ ಕಸಿದುಕೊಳ್ಳುವುದು ಅಕ್ಷ್ಯಮ್ಯ. ರೈತ ವಿರೋಧಿ ಟೌನ್ ಶಿಪ್ ಯೋಜನೆಯನ್ನು ಸರಕಾರ ಸ್ಥಗಿತಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ದೂರನ್ನು ಸಲ್ಲಿಸಿತು.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಹೆಚ್.ಎಂ. ರಮೇಶ್ ಗೌಡ ಅವರು, ಈಗಾಗಲೇ ಮೊದಲ ಹಂತದ ಭೂಸ್ವಾದಿನದ ನೋಟಿಫಿಕೇಶನ್ ಹೊರಟಿಸಿರುವ ರಾಜ್ಯ ಸರ್ಕಾರವು ಸಂಪೂರ್ಣವಾಗಿ ರೈತ ವಿರೋಧಿ ನಿಲುವು ತಳೆದಿದೆ. ಮುಂದಿನ ತಿಂಗಳು ಬೃಹತ್ ಪ್ರಮಾಣದಲ್ಲಿ ಭೂಸ್ವಾಧೀನ ವಿಸ್ತರಿಸಲು ಹೊರಟಿರುವ ಸರ್ಕಾರದ ನಿಲುವು ಹಾಗೂ ಭೂಸ್ವಾಧೀನ ಯೋಜನೆಯನ್ನು ಕೂಡಲೇ ಕೈ ಬಿಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ಪತ್ರವನ್ನು ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ಸರ್ಕಾರ ಭೂಮಿಯನ್ನು ಕಸಿದುಕೊಳ್ಳುತ್ತಿರುವ ಭಾಗವು ಹೈನುಗಾರಿಕೆಯ ಸಮೃದ್ಧ ಜಾಗವಾಗಿದ್ದು, ಮಾಸಿಕ ಸುಮಾರು 6 ಲಕ್ಷಕ್ಕೂ ಹೆಚ್ಚು ಲೀಟರ್ ಹಾಲನ್ನು ಬೆಂಗಳೂರು ಡೇರಿಗೆ ಪೂರೈಕೆ ಮಾಡುತ್ತಿದೆ. ಭೂಮಿ ರಿಯಲ್ ಎಸ್ಟೇಟ್ ಕುಳಗಳ ಪಾಲಾದರೆ ಅಷ್ಟೂ ಹಾಲಿನ ಉತ್ಪಾದನೆ ನಿಂತು ಹೋಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.