ಬೆಳಗಾವಿ: 2 ಕೋಟಿ ರೂ ವಿಮೆ ಹಣಕ್ಕಾಗಿ ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದ ಮಗಳು; ಮರ್ಯಾದೆಗೆ ಅಂಜಿ ತಾಯಿ ಆತ್ಮಹತ್ಯೆ!
ಪ್ರಕರಣದ ಪ್ರಮುಖ ಆರೋಪಿ ಸುಮಾ ಮಂಜರಗಿ ಬಂಧನಕ್ಕೊಳಗಾಗುತ್ತಿದ್ದಂತೆ, ಅತ್ತ ಅವರ ತಾಯಿ, ಮಗಳ ಕೃತ್ಯದಿಂದ ಆಘಾತಗೊಂಡಿದ್ದಾರೆ ಮತ್ತು ಮರ್ಯಾದೆಗೆ ಅಂಜಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ಎರಡು ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಪ್ರಿಯಕರನ ಜೊತೆ ಸೇರಿ ತನ್ನ ಪತಿ, ಮಾಜಿ ಸೈನಿಕನ ಕೊಲೆ ಮಾಡಿದ್ದ ಸುಮಾ ಮಂಜರಗಿ ಸೇರಿದಂತೆ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಸುಮಾ ಮಂಜರಗಿ ಬಂಧನಕ್ಕೊಳಗಾಗುತ್ತಿದ್ದಂತೆ, ಅತ್ತ ಅವರ ತಾಯಿ, ಮಗಳ ಕೃತ್ಯದಿಂದ ಆಘಾತಗೊಂಡಿದ್ದಾರೆ ಮತ್ತು ಮರ್ಯಾದೆಗೆ ಅಂಜಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ಸುಮಾ ಮಂಜರಗಿ ಅವರ ತಾಯಿ ಮಹಾದೇವಿ ಬದಾಮಿ(57) ಅವರು ಇಂದು ನೇಣಿಗೆ ಶರಣಾಗಿದ್ದಾರೆ.
ಮಗಳು ಅರೆಸ್ಟ್ ಆಗುತ್ತಿದ್ದಂತೆ ಮಾನಸಿಕವಾಗಿ ಜರ್ಜರಿತರಾಗಿದ್ದ ತಾಯಿ ಮಹಾದೇವಿ, ಮನನೊಂದು ಇಂದು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಮೆ ಹಣಕ್ಕಾಗಿ ಕೊಲೆ ಸಂಚು
ಮಾಜಿ ಯೋಧ ಸಂದೀಪ್ ಹೆಸರಿನಲ್ಲಿದ್ದ 2 ಕೋಟಿ ರೂ ವಿಮೆ ಹಣಕ್ಕಾಗಿ ಆತನನ್ನು ಕೊಂದು ಸಹಜ ಸಾವು ಎಂದು ಬಿಂಬಿಸಲು ಆರೋಪಿಗಳು ಮುಂದಾಗಿದ್ದರು.
ಸಂದೀಪ್ ಅವರು HDFC ಬ್ಯಾಂಕ್ ಮತ್ತು SBI ಯಲ್ಲಿ ವಿಮಾ ಪಾಲಿಸಿಗಳನ್ನು ಹೊಂದಿದ್ದರು. ಅವರ ಅಪಘಾತದ ಸಾವಿನ ಸಂದರ್ಭದಲ್ಲಿ ಸುಮಾರು ₹2 ಕೋಟಿ ವಿಮಾ ಮೊತ್ತ ದೊರೆಯಲಿದೆ ಎಂಬ ನಂಬಿಕೆ ಆರೋಪಿಗಳಿಗೆ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಮೃತನ ಪತ್ನಿ, ಆಕೆಯ ಪ್ರಿಯಕರ ಹಾಗೂ ಕೆಲ ಸರ್ಕಾರಿ ನೌಕರರು ಸೇರಿದಂತೆ ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ.
ಬಂಧಿತರನ್ನು ಮೃತನ ಪತ್ನಿ ಸುಮಾ ಸಂದೀಪ್ ಮಂಜರಗಿ, ಸುಮಾ ಪ್ರಿಯಕರ ಪುಂಡಲೀಕ್ ವಿಠ್ಠಲ್ ಡೊಂಬಾರ್, RMP ವೈದ್ಯ ಡಾ. ಬಸವರಾಜ ಭಾಸ್ಮೆ, ಬೆಳಗಾವಿ ಆಯುಕ್ತರ ಕಚೇರಿಯ FDA ಅಧಿಕಾರಿ ಅಶೋಕ್ ಗುಜನಾಳ, ವಿಧಿವಿಜ್ಞಾನ ಪ್ರಯೋಗಾಲಯದ ಕ್ಲರ್ಕ್ ಅಪ್ಪಾಸಾಹೇಬ ನಾಯಕ್, ಪ್ರಯೋಗಾಲಯ ಸಹಾಯಕ ಚನ್ನಯ್ಯ ಅಡಿವಿಸ್ವಾಮಿಮಠ, ಹಿರಿಯ ವೈಜ್ಞಾನಿಕ ಅಧಿಕಾರಿ ಪಿ.ಎನ್. ನಾಗರಾಜ್, ಪುಂಡಲೀಕ್‌ನ ಸಹಚರ ಸಚಿನ್ ಸೆಳಾರ್ ಮತ್ತು ಫಾರ್ಮಸಿ ವಿದ್ಯಾರ್ಥಿ ಹಾಗೂ ಪುಂಡಲೀಕ್‌ನ ಸಹಚರ ರಾಹುಲ್ ಜೋಗಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



