ರುಕ್ಮಿಣಿ ವಸಂತ್ ಬಿಕಿನಿ ಫೋಟೋ ವೈರಲ್ ಕೇಸ್: 20 ಲಕ್ಷ ರೂ ಪ್ಯಾಕೇಜ್ ಹೊಂದಿದ್ದ software engineer, Funಗಾಗಿ ನಟಿಯರ ಡೀಪ್‌ಫೇಕ್ ವಿಡಿಯೋ ಸೃಷ್ಟಿ..!
ಬಂಧಿತ ಆರೋಪಿ ರಂಜಿತ್ ಕುಮಾರ್ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಉತ್ತಮ ಸಂಬಳ ಮತ್ತು ವೃತ್ತಿಪರ ಬದುಕು ಹೊಂದಿದ್ದರೂ, ಎಐ ತಂತ್ರಜ್ಞಾನ ಬಳಸಿ ನಟಿಯರ ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸುವ ಚಟ ಬೆಳೆಸಿಕೊಂಡಿದ್ದ ಎನ್ನಲಾಗಿದೆ.

ಬೆಂಗಳೂರು: ಎಐ (AI) ತಂತ್ರಜ್ಞಾನ ಬಳಸಿ ನಟಿ ರುಕ್ಮಿಣಿ ವಸಂತ್ ಅವರ ಅಶ್ಲೀಲ ಫೋಟೋಗಳು ಮತ್ತು ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣದ ತನಿಖೆಯಲ್ಲಿ ಮಹತ್ವದ ಮಾಹಿತಿಗಳು ಹೊರಬಿದ್ದಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಗಳ ಪೈಕಿ ಒಬ್ಬ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದು, ವರ್ಷಕ್ಕೆ ಸುಮಾರು 20 ಲಕ್ಷ ರೂಪಾಯಿ ಸಂಬಳ ಪಡೆಯುತ್ತಿದ್ದ ಎಂಬುದು ಬೆಳಕಿಗೆ ಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ, ಬಂಧಿತ ಆರೋಪಿ ರಂಜಿತ್ ಕುಮಾರ್ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಉತ್ತಮ ಸಂಬಳ ಮತ್ತು ವೃತ್ತಿಪರ ಬದುಕು ಹೊಂದಿದ್ದರೂ, ಎಐ ತಂತ್ರಜ್ಞಾನ ಬಳಸಿ ನಟಿಯರ ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸುವ ಚಟ ಬೆಳೆಸಿಕೊಂಡಿದ್ದ ಎನ್ನಲಾಗಿದೆ.
ವಿಚಾರಣೆ ವೇಳೆ ಆರೋಪಿ, "ಕೇವಲ ಮನರಂಜನೆಗಾಗಿ (Fun) ಈ ರೀತಿಯ ಡೀಪ್‌ಫೇಕ್ ವಿಡಿಯೋಗಳನ್ನು ಮಾಡುತ್ತಿದ್ದೆ" ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.
ಮತ್ತೊಬ್ಬ ಆರೋಪಿ ರವಿಕುಮಾರ್ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಯಾಗಿದ್ದು, ತನ್ನದೇ ಯೂಟ್ಯೂಬ್ ಚಾನೆಲ್ ಹೊಂದಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೀಕ್ಷಣೆ ಮತ್ತು ಜನಪ್ರಿಯತೆ ಗಳಿಸುವ ಉದ್ದೇಶದಿಂದ ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸಿ ಅಪ್‌ಲೋಡ್ ಮಾಡುತ್ತಿದ್ದ ಎನ್ನಲಾಗಿದೆ.
ಪ್ರಕರಣದ ತನಿಖೆ ವೇಳೆ ಆರೋಪಿಗಳು ಎಐ ಆಧಾರಿತ ಸಾಫ್ಟ್‌ವೇರ್ ಮತ್ತು ಇಮೇಜ್ ಎಡಿಟಿಂಗ್ ಟೂಲ್‌ಗಳನ್ನು ಬಳಸಿ ನಟಿಯರ ಫೋಟೋಗಳನ್ನು ಅಶ್ಲೀಲವಾಗಿ ಮಾರ್ಪಡಿಸಿ, ಅವುಗಳನ್ನು ವಿವಿಧ ಡಿಜಿಟಲ್ ವೇದಿಕೆಗಳಲ್ಲಿ ಹಂಚಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ರುಕ್ಮಿಣಿ ವಸಂತ್ ಅವರ ನಕಲಿ ಮತ್ತು ಅಶ್ಲೀಲ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪ್ರಕರಣ ದಾಖಲಾಗಿತ್ತು. ತನಿಖೆ ಚುರುಕುಗೊಳಿಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಎಐ ತಂತ್ರಜ್ಞಾನದ ದುರ್ಬಳಕೆ ಮೂಲಕ ಸೆಲೆಬ್ರಿಟಿಗಳು ಹಾಗೂ ಸಾರ್ವಜನಿಕ ವ್ಯಕ್ತಿಗಳ ಚಿತ್ರಗಳನ್ನು ತಿರುಚಿ ಹರಡುವ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಇಂತಹ ಕೃತ್ಯಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
AI ಮತ್ತು ಡೀಪ್‌ಫೇಕ್ ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುವುದು ಕಾನೂನುಬದ್ಧವಾಗಿ ಶಿಕ್ಷಾರ್ಹ ಅಪರಾಧವಾಗಿದ್ದು, ಸಾಮಾಜಿಕ ಜಾಲತಾಣ ಬಳಕೆದಾರರು ಎಚ್ಚರಿಕೆಯಿಂದಿರಬೇಕು ಎಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



