ರಾಜ್ಯ

ಕಾಲವೇ ಎಲ್ಲವನ್ನು ನಿರ್ಣಯಿಸುತ್ತೆ; ನಮ್ಮ ಶಾಸಕರಿಂದ ಆಣೆ-ಪ್ರಮಾಣ ಮಾಡಿಸಲ್ಲ: ಕುಮಾರಸ್ವಾಮಿ

ನಾವೆಲ್ಲರೂ ನಮ್ಮ ಅಭಿವೃದ್ಧಿಗೆ ಮತ ಹಾಕಿದ್ದೇವೆ ಎಂದು ಹೇಳಿದರು. ಹೀಗಾಗಿ ನಮ್ಮ ಪಕ್ಷದಲ್ಲಿ ಆಣೆ ಪ್ರಮಾಣದಿಂದ ಸಮಸ್ಯೆ ಬಗೆಹರಿಯುವುದಿಲ್ಲ ಎಂಬುದು ನನ್ನ ನಂಬಿಕೆ, ಹಾಗಾಗಿ ಎಲ್ಲವನ್ನೂ ಕಾಲವೇ ನಿರ್ಣಯಿಸುತ್ತದೆ ಎಂದು.ಕುಮಾರಸ್ವಾಮಿ ತಿಳಿಸಿದ್ದಾರೆ.

ಕಾಲವೇ ಎಲ್ಲವನ್ನು ನಿರ್ಣಯಿಸುತ್ತೆ; ನಮ್ಮ ಶಾಸಕರಿಂದ ಆಣೆ-ಪ್ರಮಾಣ ಮಾಡಿಸಲ್ಲ: ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ
Published On :

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿಯವರು ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಹೊರಟಿರುವುದು ಅವರ ಪಕ್ಷದ ತೀರ್ಮಾನ. ಆದರೆ, ನಾನು ಶಾಸಕರಿಂದ ಆಣೆ ಪ್ರಮಾಣ ಮಾಡಿಸುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ಜೆಡಿಎಸ್ ಶಾಸಕರ ಸಭೆಯಲ್ಲಿ ಎಲ್ಲ 17 ಶಾಸಕರು ಹಾಜರಿದ್ದರು. ನಾವೆಲ್ಲರೂ ನಮ್ಮ ಅಭಿವೃದ್ಧಿಗೆ ಮತ ಹಾಕಿದ್ದೇವೆ ಎಂದು ಹೇಳಿದರು. ಹೀಗಾಗಿ ನಮ್ಮ ಪಕ್ಷದಲ್ಲಿ ಆಣೆ ಪ್ರಮಾಣದಿಂದ ಸಮಸ್ಯೆ ಬಗೆಹರಿಯುವುದಿಲ್ಲ ಎಂಬುದು ನನ್ನ ನಂಬಿಕೆ, ಹಾಗಾಗಿ ಎಲ್ಲವನ್ನೂ ಕಾಲವೇ ನಿರ್ಣಯಿಸುತ್ತದೆ ಎಂದು.ಕುಮಾರಸ್ವಾಮಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಶಾಸಕರನ್ನು ಪತ್ತೆಹಚ್ಚಲು ಬಿಜೆಪಿ ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸುವ ಬಗ್ಗೆ ಪ್ರಶ್ನಿಸಿದಾಗ ಕೇಂದ್ರ ಸಚಿವರು, ಅಡ್ಡ ಮತದಾನ ಎಂಬುದು ತುಂಬ ಬೇಸರದ ವಿಷಯ. ಯಾರು ಈ ರೀತಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬುದು ಧರ್ಮಸ್ಥಳದಲ್ಲಿ ಬಯಲಿಗೆ ಬರಬಹುದು. ಧರ್ಮಸ್ಥಳದಲ್ಲಿ ಸತ್ಯ ಹೊರಕ್ಕೆ ಬರುತ್ತದೆ ಎಂಬ ನಂಬಿಕೆ ಅವರಿಗೆ ಇದೆ ಎಂಬ ಉದ್ದೇಶದಿಂದ ಬಿಜೆಪಿ ನಾಯಕರು ಅಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದಿರಬಹುದು ಎಂದರು.

ಮಾಜಿ ಮಂತ್ರಿ ಜಮೀರ್ ಅಹ್ಮದ್ ಸೇರಿದಂತೆ ಇನ್ನು ಅನೇಕ ನಾಯಕರು ಜೆಡಿಎಸ್ ಪಕ್ಷಕ್ಕೆ ಸೇರುತ್ತಾರೆ ಎನ್ನುವ ಸುದ್ದಿ ಇದೆಯಲ್ಲ ಎನ್ನುವ ಪ್ರಶ್ನೆಗೆ, ಈ ಬಗ್ಗೆ ನಾನು ಏನೂ ಹೇಳಲಾರೆ. ಮುಂದೆ ಯಾರು ಮುಖ್ಯಮಂತ್ರಿ ಆಗಬೇಕು, ಯಾವ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬುದನ್ನು ಜನತೆ ತೀರ್ಮಾನಿಸುತ್ತಾರೆ. ತಮಿಳುನಾಡಿನಲ್ಲಿ ಚಿತ್ರನಟ ವಿಜಯ್ ಅವರು ಅಧಿಕಾರಕ್ಕೆ ಬಂದು ಮುಖ್ಯಮಂತ್ರಿ ಆಗುತ್ತಾರೆ ಎಂದು ಯಾರಾದರೂ ಪೂಜೆ ಮಾಡಿದ್ದರೆ? ಈ ಕೆಟ್ಟ ಸರ್ಕಾರದಿಂದ ರೋಸಿ ಹೋಗಿರುವ ರಾಜ್ಯದಲ್ಲಿ ಜನರು ಬದಲಾವಣೆ ತರುತ್ತಾರೆ ಎಂದು ನಂಬಿದ್ದೇನೆ ಎಂದು ಇದೇ ವೇಳೆ ಕುಮಾರಸ್ವಾಮಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.