ರಾಜ್ಯ

CM ಡಿ.ಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್: Facebook ಖಾತೆಗಳ ವಿರುದ್ಧ FIR ದಾಖಲು

ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಜೂನ್ 20ರಂದು ವಕೀಲ ದೀಪು ಸಿ.ಆರ್. ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ.

CM ಡಿ.ಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್: Facebook ಖಾತೆಗಳ ವಿರುದ್ಧ FIR ದಾಖಲು
ಡಿ.ಕೆ ಶಿವಕುಮಾರ್
Published On :

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಅವಹೇಳನಕಾರಿ ಮಾಹಿತಿ ಹಂಚಿಕೆ ಮಾಡಿದ ಆರೋಪದ ಮೇಲೆ ಕೆಲವು ಫೇಸ್‌ಬುಕ್ ಖಾತೆಗಳ ನಿರ್ವಾಹಕರ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಜೂನ್ 20ರಂದು ವಕೀಲ ದೀಪು ಸಿ.ಆರ್. ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ.

ಎಫ್‌ಐಆರ್ ಪ್ರಕಾರ, ಜೂನ್ 17ರಂದು 'Kumaraswamy for CM' ಹಾಗೂ 'Janata Dal Secular' ಹೆಸರಿನ ಫೇಸ್‌ಬುಕ್ ಖಾತೆಗಳಲ್ಲಿ "ಹಳೆಯ ಚಾಳಿ ಮತ್ತೆ ಆರಂಭ; ಹುಟ್ಟುಗುಣ ಸುಟ್ಟಲೂ ಹೋಗಲ್ಲ ಎಂಬ ಶೀರ್ಷಿಕೆಯಡಿ ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿ ಹಾಗೂ ಸುಳ್ಳು ಮಾಹಿತಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 192ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪೋಸ್ಟ್‌ಗಳ ಮೂಲ, ಅವುಗಳನ್ನು ಪ್ರಕಟಿಸಿದ ವ್ಯಕ್ತಿಗಳು ಹಾಗೂ ಅದರ ಹಿಂದಿರುವ ಉದ್ದೇಶದ ಕುರಿತು ತನಿಖೆ ಆರಂಭಿಸಿದ್ದಾರೆ. ಇದೇ ವೇಳೆ ಈ ಸಾಮಾಜಿಕ ಜಾಲತಾಣ ಖಾತೆಗಳ ನಿರ್ವಾಹಕರನ್ನು ಗುರುತಿಸುವ ಕಾರ್ಯವನ್ನು ಮುಂದುವರೆಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.