ರಾಜ್ಯ

ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು; ಇಂದಿರಾನಗರ - ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತ!

ನಮ್ಮ ಮೆಟ್ರೋದ ಕಾರ್ಯಾಚರಣೆ ನಿಯಂತ್ರಣ ಕೇಂದ್ರ(OCC)ದಿಂದ ಪಡೆದ ಮಾಹಿತಿಯ ಪ್ರಕಾರ, ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ಒಂದು ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.

ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು; ಇಂದಿರಾನಗರ - ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತ!
ಕಬ್ಬನ್‌ ಪಾರ್ಕ್‌ ಮೆಟ್ರೋ ನಿಲ್ದಾಣ
Published On :

ಬೆಂಗಳೂರು: ನಮ್ಮ ಮೆಟ್ರೋದ ಕಾರ್ಯಾಚರಣೆ ನಿಯಂತ್ರಣ ಕೇಂದ್ರ(OCC)ದಿಂದ ಪಡೆದ ಮಾಹಿತಿಯ ಪ್ರಕಾರ, ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ಒಂದು ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.: ನಮ್ಮ ಮೆಟ್ರೋದ ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ಒಂದು ರೈಲು ತಾಂತ್ರಿಕ ದೋಷದಿಂದ ಕೆಟ್ಟು ನಿಂತಿದ್ದು, ಮೆಟ್ರೋ ಸಂಚಾರದಲ್ಲಿ ಭಾಗೀ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ.

ನಮ್ಮ ಮೆಟ್ರೋದ ಕಾರ್ಯಾಚರಣೆ ನಿಯಂತ್ರಣ ಕೇಂದ್ರ(OCC)ದಿಂದ ಪಡೆದ ಮಾಹಿತಿಯ ಪ್ರಕಾರ, ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ಒಂದು ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.

ಕಾರ್ಯಾಚರಣೆ ಹಾಗೂ ನಿರ್ವಹಣಾ ತಂಡಗಳು ತುರ್ತಾಗಿ ದೋಷವನ್ನು ಸರಿಪಡಿಸುವ ನಿಟ್ಟಿನಲ್ಲಿ , ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ನೇರಳೆ ಮಾರ್ಗದಲ್ಲಿ ಮೆಜೆಸ್ಟಿಕ್ ಮತ್ತು ಚಲ್ಲಘಟ್ಟ ನಡುವೆ ಹಾಗೂ ಇಂದಿರಾನಗರ ಮತ್ತು ವೈಟ್‌ಫೀಲ್ಡ್(ಕಾಡುಗೋಡಿ) ರೈಲುಗಳು ಮಾತ್ರ ಸಂಚರಿಸುತ್ತಿವೆ.

ಇಂದು ರಾತ್ರಿ 9:00 ಗಂಟೆಯಿಂದ, ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಪ್ರಸ್ತುತ ಕೆಳಕಂಡ ವಿಭಾಗಗಳಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತಿವೆ

ಇಂದಿರಾನಗರ ↔️ ವೈಟ್‌ಫೀಲ್ಡ್ (ಕಾಡುಗೋಡಿ)

ಮೆಜೆಸ್ಟಿಕ್ ↔️ ಚಲ್ಲಘಟ್ಟ

ಸಾಮಾನ್ಯ ಮೆಟ್ರೋ ಸೇವೆಯನ್ನು ಶೀಘ್ರದಲ್ಲಿ ಪುನಃಸ್ಥಾಪಿಸಲು ಬಿಎಂಆರ್‌ಸಿಎಲ್‌ನ ಕಾರ್ಯಾಚರಣೆ ಹಾಗೂ ನಿರ್ವಹಣಾ ತಂಡಗಳು ತುರ್ತು ಕ್ರಮಗಳನ್ನು ಕೈಗೊಳ್ಳುತ್ತಿವೆ.

ಪ್ರಯಾಣಿಕರು ಈ ತಾತ್ಕಾಲಿಕ ಸೇವಾ ವ್ಯವಸ್ಥೆಯನ್ನು ಗಮನಿಸಿ ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ವಿನಂತಿಸಲಾಗಿದೆ.

ಉಂಟಾಗಿರುವ ತಾತ್ಕಾಲಿಕ ಅನಾನುಕೂಲತೆಗೆ ಬಿಎಂಆರ್‌ಸಿಎಲ್ ವಿಷಾದ ವ್ಯಕ್ತಪಡಿಸುತ್ತದೆ ಹಾಗೂ ಪ್ರಯಾಣಿಕರ ಸಹಕಾರಕ್ಕೆ ಧನ್ಯವಾದ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.