ಬೆಂಗಳೂರು: ಪಿಜಿ ಮಾಲೀಕನ ಮೇಲೆ ಬ್ಯಾಟ್‌ನಿಂದ ಹಲ್ಲೆ ನಡೆಸಿ ಕೊಲೆ; ಇಬ್ಬರು ಕಾಲೇಜು ವಿದ್ಯಾರ್ಥಿಗಳ ಬಂಧನ!
ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಇಬ್ಬರು ಕಾಲೇಜು ವಿದ್ಯಾರ್ಥಿಗಳು ಬ್ಯಾಟ್‌ನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಪೇಯಿಂಗ್ ಗೆಸ್ಟ್ (PG) ವಸತಿ ಸೌಕರ್ಯದ ಮಾಲೀಕ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು ಮಾಧವ್ ಮಟ್ಲೆ (37) ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸೋಮವಾರ ಸಂಜೆ 6.30ರ ಸುಮಾರಿಗೆ ಕಸ್ತೂರಿನಗರ ಮುಖ್ಯ ರಸ್ತೆಯ ಬಳಿಯಿರುವ ಪಿಜಿ ಮುಂದೆ ಈ ಘಟನೆ ನಡೆದಿದೆ. ಆರೋಪಿಗಳು ತಮ್ಮ ಆವರಣದೊಳಗೆ ಕಾಲು ತೊಳೆಯುವುದಕ್ಕೆ ಸಂತ್ರಸ್ತ ಆಕ್ಷೇಪಿಸಿದ ನಂತರ ಈ ಘಟನೆ ನಡೆದಿದೆ.
ಪ್ರಾಥಮಿಕ ಮಾಹಿತಿಯನ್ನು ಉಲ್ಲೇಖಿಸಿ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ರಾಕೇಶ್ ಮತ್ತು ಡಾನ್ ಬ್ರೈಟ್ ಸನ್ ಎಂಬುವವರು ಪಿಜಿ ಆವರಣದೊಳಗೆ ಟ್ಯಾಪ್ ನೀರನ್ನು ಬಳಸಿ ಕಾಲು ತೊಳೆಯುತ್ತಿದ್ದರು. ಇದಕ್ಕೆ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದು ಅವರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಘಟನೆ ನಡೆದ ಪಿಜಿಯಲ್ಲಿ ಸ್ನೇಹಿತರಾದ ಇಬ್ಬರು ಆರೋಪಿಗಳು ತಂಗಿರಲಿಲ್ಲ. ಘಟನೆ ನಡೆದ ಸಮಯದಲ್ಲಿ ಅವರು ಮದ್ಯದ ಅಮಲಿನಲ್ಲಿದ್ದರೆಂದು ಆರೋಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಈ ಮಧ್ಯೆ, ಮಟ್ಲೆ ಆರೋಪಿಗಳಿಗೆ ಹೊಡೆಯಲು ಬ್ಯಾಟ್ ತಂದಿದ್ದಾರೆ. ಆದರೆ, ಆರೋಪಿಗಳಿಬ್ಬರು ಅದೇ ಬ್ಯಾಟ್ ಅನ್ನು ಕಸಿದುಕೊಂಡು ಸಂತ್ರಸ್ತನ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದರು.
ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಕೇಶ್ ಅಂತಿಮ ವರ್ಷದ ಬಿಕಾಂ (BCom) ವಿದ್ಯಾರ್ಥಿಯಾಗಿದ್ದರೆ, ಡಾನ್ ಬ್ರೈಟ್ ಸನ್ ಪ್ರಥಮ ವರ್ಷದ ಬಿಬಿಎ (BBA) ವಿದ್ಯಾರ್ಥಿಯಾಗಿದ್ದಾನೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



