ಹರಿಹರದಲ್ಲಿ ಶಂಕಿತ ಉಗ್ರನ ಬಂಧನ
ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯೊಂದಿಗೆ ನೇರ ಸಂಪರ್ಕ ಹೊಂದಿದ್ದಾನೆ ಎನ್ನಲಾದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಾವಣಗೆರೆ: ದಾವಣಗೆರೆಯ ಹರಿಹರದಲ್ಲಿ ಶಂಕಿತ ಉಗ್ರನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ದಾವಣಗೆರೆ ಜಿಲ್ಲಾ ಪೊಲೀಸ್ ಹಾಗೂ ಕೇಂದ್ರ ಗುಪ್ತಚರ ಸಂಸ್ಥೆ (ಐಬಿ) ಅಧಿಕಾರಿಗಳು ಜಂಟಿಯಾಗಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ, ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯೊಂದಿಗೆ ನೇರ ಸಂಪರ್ಕ ಹೊಂದಿದ್ದಾನೆ ಎನ್ನಲಾದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಉತ್ತರ ಪ್ರದೇಶದ ಮೂಲದ ಸುಹೈಲ್ ಎಂದು ಗುರುತಿಸಲಾಗಿದ್ದು, ಆತ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಬಣ್ಣದ ಕೆಲಸ ಮಾಡುವ ನೆಪದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇತ್ತೀಚೆಗೆ ತುಮಕೂರು ಮತ್ತು ದಾವಣಗೆರೆ ನಗರಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದರು. ಅವರ ತೀವ್ರ ವಿಚಾರಣೆಯ ವೇಳೆ ದೊರೆತ ಮಹತ್ವದ ಸುಳಿವುಗಳು ಮತ್ತು ಮಾಹಿತಿಯ ಆಧಾರದ ಮೇಲೆ ಮೂರನೇ ಶಂಕಿತ ಉಗ್ರ ಸುಹೈಲ್‌ನನ್ನು ಇದೀಗ ಬನ್ನಿಕೋಡು ಗ್ರಾಮದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಸುಹೈಲ್ ಕೂಲಿ ಕಾರ್ಮಿಕನ ಸೋಗಿನಲ್ಲಿ ಗ್ರಾಮದಲ್ಲಿ ವಾಸಿಸುತ್ತಿದ್ದ ಮತ್ತು ಪಾಕಿಸ್ತಾನದಲ್ಲಿರುವ ಉಗ್ರ ಸಂಘಟನೆಗಳೊಂದಿಗೆ ನಿರಂತರ ನೇರ ಸಂಪರ್ಕದಲ್ಲಿದ್ದನೆಂದು ತನಿಖಾ ಮೂಲಗಳು ಶಂಕಿಸಿವೆ.
ಬಂಧನದ ಬಳಿಕ ಶಂಕಿತ ಉಗ್ರ ಸುಹೈಲ್‌ನನ್ನು ಹೆಚ್ಚಿನ ವಿಚಾರಣೆಗಾಗಿ ದಾವಣಗೆರೆಯಿಂದ ತುಮಕೂರು ಜಿಲ್ಲೆಗೆ ಬಿಗಿ ಭದ್ರತೆಯಲ್ಲಿ ಕರೆದೊಯ್ಯಲಾಗಿದೆ. ದಾವಣಗೆರೆ, ತುಮಕೂರು ಪೊಲೀಸರು ಹಾಗೂ ಕೇಂದ್ರ ಗುಪ್ತಚರ ಸಂಸ್ಥೆಯ ಅಧಿಕಾರಿಗಳು ಜಂಟಿಯಾಗಿ ತನಿಖೆಯನ್ನು ಮುಂದುವರಿಸಿದ್ದಾರೆ.
ಈ ಜಾಲದ ಕುರಿತು ತನಿಖೆ ಮುಂದುವರಿದಂತೆ ಇನ್ನಷ್ಟು ಆತಂಕಕಾರಿ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಜಂಟಿ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ಕೆಲವು ದೊಡ್ಡ ಉಗ್ರ ಕೃತ್ಯಗಳನ್ನು ತಡೆಯಲು ಸಾಧ್ಯವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಎಚ್.ಟಿ. ಅವರ ಮಾರ್ಗದರ್ಶನದಲ್ಲಿ, ದಾವಣಗೆರೆ ಗ್ರಾಮಾಂತರ ಉಪವಿಭಾಗದ ಡಿವೈಎಸ್ಪಿ ಬಸವರಾಜ್, ಕೇಂದ್ರ ಗುಪ್ತಚರ ಸಂಸ್ಥೆಯ ಸಿಬ್ಬಂದಿ ಹಾಗೂ ದಾವಣಗೆರೆ ಅಪರಾಧ ವಿಭಾಗದ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತಂಡ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




