ಟ್ರಾಫಿಕ್ ಫೈನ್ಗೆ ಶೇ. 50 ರಷ್ಟು ಡಿಸ್ಕೌಂಟ್: ಬೆಂಗಳೂರಿನಲ್ಲಿ ನಾಲ್ಕೇ ದಿನದಲ್ಲಿ 6 ಕೋಟಿ ರೂ. ದಂಡ ಸಂಗ್ರಹ!
ರಾಜ್ಯ ಸರ್ಕಾರ ಜೂನ್ 21 ರಿಂದ ಜುಲೈ 10ರವರೆಗೆ ಶೇ. 50 ರಷ್ಟು ದಂಡ ಪಾವತಿ ಮಾಡಲು ಅವಕಾಶ ನೀಡಿದ್ದು, ಅದರಂತೆ ಕಳೆದ ನಾಲ್ಕು ದಿನದಲ್ಲಿ ಬರೋಬ್ಬರಿ 6,06,65,150 ರೂಪಾಯಿ ಭಾರೀ ಮೊತ್ತದ ದಂಡ ವಸೂಲಿಯಾಗಿದೆ.

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘಿಸಿ, ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿದ್ದು, ಬೆಂಗಳೂರಿನಲ್ಲಿ ನಾಲ್ಕೇ ದಿನದಲ್ಲಿ ಬರೋಬ್ಬರಿ 28 ಕೋಟಿಗೆ ಹೆಚ್ಚು ದಂಡ ಸಂಗ್ರಹವಾಗಿದೆ.
ರಾಜ್ಯ ಸರ್ಕಾರ ಜೂನ್ 21 ರಿಂದ ಜುಲೈ 10ರವರೆಗೆ ಶೇ. 50 ರಷ್ಟು ದಂಡ ಪಾವತಿ ಮಾಡಲು ಅವಕಾಶ ನೀಡಿದ್ದು, ಅದರಂತೆ ಕಳೆದ ನಾಲ್ಕು ದಿನದಲ್ಲಿ ಬರೋಬ್ಬರಿ 6,06,65,150 ರೂಪಾಯಿ ಭಾರೀ ಮೊತ್ತದ ದಂಡ ವಸೂಲಿಯಾಗಿದೆ.
ಬೆಂಗಳೂರು ಸಂಚಾರ ಪೊಲೀಸರು ಬಿಡುಗಡೆ ಮಾಡಿರುವ ಅಧಿಕೃತ ಅಂಕಿಅಂಶ ಪ್ರಕಾರ, ಜೂನ್ 21 ರಿಂದ ಜೂನ್ 24 ರವರೆಗಿನ ಮೊದಲ 4 ದಿನಗಳ ಅವಧಿಯಲ್ಲಿ ವಿವಿಧ ಆನ್‌ಲೈನ್ ಮತ್ತು ಆಫ್‌ಲೈನ್ ಮಾಧ್ಯಮಗಳ ಮೂಲಕ ಒಟ್ಟು 2,00,139 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಬರೋಬ್ಬರಿ 6,06,65,150 ರೂಪಾಯಿ ಭಾರೀ ಮೊತ್ತದ ದಂಡ ಸಂಗ್ರಹಿಸಲಾಗಿದೆ.
ಬೆಂಗಳೂರು ನಗರವೊಂದರಲ್ಲೇ ಕೋಟ್ಯಂತರ ರೂಪಾಯಿ ಮೌಲ್ಯದ 5 ಕೋಟಿಗೂ ಅಧಿಕ ಇ-ಚಲನ್ ಪ್ರಕರಣಗಳು ದಂಡ ಪಾವತಿಯಾಗದೆ ವರ್ಷಗಳಿಂದ ಬಾಕಿ ಇದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಸಾರಿಗೆ ಮತ್ತು ಪೊಲೀಸ್ ಇಲಾಖೆ, ಜೂನ್ 21 ರಿಂದ ಜುಲೈ 10 ರವರೆಗೆ ಅನ್ವಯವಾಗುವಂತೆ ಸೀಮಿತ ಅವಧಿಗೆ ಈ ಶೇ 50 ರಿಯಾಯಿತಿ ಯೋಜನೆಯನ್ನು ಮರುಜಾರಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



