PWD ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆಯಲ್ಲಿ 13 ಕೋಟಿ ಮೌಲ್ಯದ ಆಸ್ತಿ ಪತ್ತೆ!
ಸಚಿವ ಸತೀಶ ಜಾರಕಿಹೊಳಿ ಭಾಮೈದ, ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳು ನಡೆಸಿದ್ದ ದಾಳಿ ಅಂತ್ಯವಾಗಿದ್ದು ಸುಮಾರು 13 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.

ಬೆಂಗಳೂರು: ಸಚಿವ ಸತೀಶ ಜಾರಕಿಹೊಳಿ ಭಾಮೈದ, ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳು ನಡೆಸಿದ್ದ ದಾಳಿ ಅಂತ್ಯವಾಗಿದ್ದು ಸುಮಾರು 13 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಬೆಳಗಾವಿ, ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆ ದಾಳಿಯಲ್ಲಿ ಸಾಕಷ್ಟು ಮಹತ್ವದ ದಾಖಲೆ, ಚಿನ್ನಾಭರಣ ಪತ್ತೆಯಾಗಿದ್ದು, ಮಹತ್ವದ ದಾಖಲೆ, ಬೇನಾಮಿ ಬಾರ್ ಲೈಸೆನ್ಸ್, ಬೇನಾಮಿ ಆಸ್ತಿ ಪತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದೀಗ ದಾಳಿಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.
ಮಂಜುನಾಥ್ ಗೆ ಸೇರಿದ 13.3 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ನಿನ್ನೆ ಇಡಿ ಅಧಿಕಾರಿಗಳು ಮಂಜುನಾಥ್ ಅವರಿಗೆ ಸೇರಿದ ಒಟ್ಟು 14 ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ದಾಳಿ ವೇಳೆ 5.5 ಕೋಟಿ ನಗದು ಸೇರಿದಂತೆ 7.8 ಕೋಟಿ ಮೌಲ್ಯದ ಚಿನ್ನಾಭರಣವನ್ನು ಇಡಿ ವಶಪಡಿಸಿಕೊಂಡಿದೆ. ಇದರ ಜೊತೆಗೆ 3.3 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ, ಕ್ಯಾಶ್ ಬುಕ್, ಆಸ್ತಿ ಪತ್ರಗಳು ದಾಳಿಯಲ್ಲಿ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.

'ಸ್ಪ್ಲೆಂಡರ್ ಸಿದ್ದಾ ರೆಡ್ಡಿ' ಬಂಧನ: ಖತರ್ನಾಕ್ ಕಳ್ಳ, 41 ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಬಳ್ಳಾರಿ ಪೊಲೀಸರು, Video
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


