ರಾಜ್ಯ

ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗೆ ಹೈಕೋರ್ಟ್​ ಬಿಗ್ ಶಾಕ್; ನಿರೀಕ್ಷಣಾ ಜಾಮೀನು ರದ್ದು

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.

ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗೆ ಹೈಕೋರ್ಟ್​ ಬಿಗ್ ಶಾಕ್; ನಿರೀಕ್ಷಣಾ ಜಾಮೀನು ರದ್ದು
ವಚನಾನಂದ ಸ್ವಾಮೀಜಿ
Published On :

ಬೆಂಗಳೂರು: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಚಾಟನೆಗೊಂಡಿರುವ ವಚನಾನಂದ ಶ್ರೀಗೆ ಕರ್ನಾಟಕ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಅವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಗುರುವಾರ ರದ್ದುಗೊಳಿಸಿದೆ. ಹೀಗಾಗಿ ಶ್ರೀಗಳಿಗೆ ಈಗ ಬಂಧನ ಭೀತಿ ಎದುರಾಗಿದೆ.

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಶ್ರೀಗಳು, ಸ್ಥಳೀಯ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು.

ಆದರೆ ಪ್ರಕರಣ ದಾಖಲಾಗುವ ಮುನ್ನವೇ ವಚನಾನಂದ ಶ್ರೀ ನಿರೀಕ್ಷಣಾ ಜಾಮೀನು ಪಡೆದಿದ್ದನ್ನು ಪ್ರಶ್ನಿಸಿ ಬಾಲಕನ ತಾಯಿ ಹೈಕೋರ್ಟ್​ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ‌.ನಾಗಪ್ರಸನ್ನ ಅವರು, ಪ್ರಕರಣ ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ನೀಡಿದ್ದು ಸರಿಯಾದ ಕ್ರಮವಲ್ಲ ಎಂದು ಹೇಳಿ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ್ದಾರೆ. ಆದರೆ, ರೆಗ್ಯುಲರ್ ಜಾಮೀನು ಅರ್ಜಿ ಸಲ್ಲಿಸಲು ಮೂರು ವಾರಗಳ ಕಾಲಾವಕಾಶ ನೀಡಿದ್ದು, ಅಲ್ಲಿಯವರೆಗೂ ನಿರೀಕ್ಷಣಾ ಜಾಮೀನಿನ ರಕ್ಷಣೆ ಮುಂದುವರಿಯಲಿದೆ ಎಂದು ಹೈಕೋರ್ಟ್ ಹೇಳಿದೆ.

ಮೇ 7ರಂದು ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಆದರೆ ಶ್ರೀಗಳು ಅದರ ಹಿಂದಿನ ದಿನ ಅಂದರೆ ಮೇ 6 ರಂದೇ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ದೂರು ದಾಖಲು ಮುನ್ನವೇ ಜಾಮೀನು ಕೊಟ್ಟ ರೀತಿ ಆಘಾತಕಾರಿ ಎಂದು ಹೈಕೋರ್ಟ್ ಹೇಳಿದ್ದು, ಮೇಲ್ನೋಟಕ್ಕೆ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ ಎಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.