ಮತ್ತೆ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಕೆಟ್ಟುನಿಂತ ರೈಲು; ಕೆಲಕಾಲ ಸಂಚಾರದಲ್ಲಿ ವ್ಯತ್ಯಯ!
ಕಳೆದ ಮಂಗಳವಾರವಷ್ಟೇ ಇದೇ ಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲು ಕೆಟ್ಟು ನಿಂತ ಪರಿಣಾಮ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿತ್ತು.

ಬೆಂಗಳೂರು: ನಮ್ಮ ಮೆಟ್ರೋದ ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಗುರುವಾರ ಮತ್ತೆ ರೈಲು ಕೆಟ್ಟು ನಿಂತಿದ್ದು, ತಾಂತ್ರಿಕ ದೋಷ ಕಂಡುಬಂದಿದೆ. ಪರಿಣಾಮ ಕೆಲಕಾಲ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
ಕಳೆದ ಮಂಗಳವಾರವಷ್ಟೇ ಇದೇ ಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲು ಕೆಟ್ಟು ನಿಂತ ಪರಿಣಾಮ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿತ್ತು.
ಇಂದು ಸಹ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ, ರೈಲಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಡೋರ್ ಲಾಕ್ ಆಗದಿದ್ದರಿಂದ ಲೋಕೋಪೈಲೆಟ್ ರೈಲನ್ನು ನಿಲ್ಲಿಸಿದ್ದರು. ಮೆಟ್ರೋ ಸಿಬ್ಬಂದಿ, ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಇಳಿಯುವಂತೆ ಕೇಳಿಕೊಂಡರು.

ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು; ಇಂದಿರಾನಗರ - ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತ!
ಕಾರ್ಯಾಚರಣೆ ಹಾಗೂ ನಿರ್ವಹಣಾ ತಂಡಗಳು ತುರ್ತಾಗಿ ತಾಂತ್ರಿಕ ದೋಷವನ್ನು ಸರಿಪಡಿಸಿದ್ದು, ರೈಲು ಸೇವೆ ಪುನಾರಂಭವಾಗಿದೆ. ಆದರೆ ರೈಲುಗಳು ವಿಳಂಬವಾಗಿ ಸಂಚರಿಸುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


