ತುಮಕೂರು: ಹೊಸ ಬೈಕ್ ಖರೀದಿಸಿದ ಸಂಭ್ರಮ; ಊರಿಗೆ ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಯುವಕ ದುರ್ಮರಣ
ಹೊಸ ಬೈಕ್ ಖರೀದಿಸಿದ ಖುಷಿಯಲ್ಲಿ ಊರಿಗೆ ತೆರಳುತ್ತಿದ್ದ ವೇಳೆ ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು: ಹೊಸ ಬೈಕ್ ಖರೀದಿಸಿದ ಖುಷಿಯಲ್ಲಿ ಊರಿಗೆ ತೆರಳುತ್ತಿದ್ದ ವೇಳೆ ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತನನ್ನು 19 ವರ್ಷದ ನಂದೀಶ್ ಕುಮಾರ್ ಎಂದು ಗುರುತಿಸಲಾಗಿದೆ. ತುಮಕೂರಿನ ಪಾವಗಡ ತಾಲೂಕಿನ ಗಂಗಸಾಗರ ಕ್ರಾಸ್ ಬಳಿ ಅಪಘಾತ ಸಂಭವಿಸಿತ್ತು.
ಮೃತ ನಂದೀಶ್ ನಿನ್ನೆಯಷ್ಟೇ ಹೊಸ ಬೈಕ್ ಖರೀದಿಸಿದ್ದು ಸ್ನೇಹಿತ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ನಂದೀಶ್ ಸ್ಥಳದಲ್ಲೇ ಮೃತಪಟ್ಟಿದ್ದರೇ ಹಿಂಬದಿ ಸವಾರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಾದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



