ನಾನೇ ಸೀರೆ ಕಟ್ ಮಾಡಿ ವೈಶಾಖ್ ಮೃತದೇಹ ಕೆಳಗೆ ಇಳಿಸಿದ್ದೆ: ಪೊಲೀಸರ ಮುಂದೆ ನಟಿ ಕೃಷಿ ತಾಪಂಡ ಹೇಳಿದ್ದೇನು?
ವೈಶಾಖ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅವರ ಪತ್ನಿ ಮೇಘನಾ ಅವರು ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು: ನಟಿ ಕೃಷಿ ತಾಪಂಡ ಅವರು ವಾಸವಿರುವ ಆರ್.ಆರ್. ನಗರದ ಎಲಿಗೇಟ್ ಅಪಾರ್ಟ್‌ಮೆಂಟ್‌ನ ಬೆಡ್ರೂಮ್ನಲ್ಲಿ ಅವರ ಗೆಳೆಯ ಹಾಗೂ ಉದ್ಯಮಿ ವೈಶಾಕ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಗುರುವಾರ ಸಂಜೆ ಚಾಮರಾಜಪೇಟೆ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಿತು.
ವೈಶಾಖ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅವರ ಪತ್ನಿ ಮೇಘನಾ ಅವರು ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಘಟನೆ ನಡೆದ ದಿನವೇ ನಟಿ ಕೃಷಿ ತಾಪಂಡ ಅವರಿಂದ ಪೊಲೀಸರು ಅಧಿಕೃತವಾಗಿ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಪೊಲೀಸರ ಮುಂದೆ ನಟಿ ಹೇಳಿದ್ದೇನು?
ಘಟನೆ ನಡೆದ ದಿನದ ಕುರಿತು ಪೊಲೀಸರ ಮುಂದೆ ವಿವರಣೆ ನೀಡಿರುವ ನಟಿ ಕೃಷಿ ತಾಪಂಡ, ನಾನು ಕಳೆದ ಮೂರು ದಿನಗಳಿಂದ ಮನೆಯಲ್ಲಿ ಇರಲಿಲ್ಲ. ವೈಯಕ್ತಿಕ ಕಾರಣಗಳಿಗಾಗಿ ಮೂರು ದಿನ ಕ್ಷೇಮವನಕ್ಕೆ ಹೋಗಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ಬುಧವಾರ ರಾತ್ರಿ ಸುಮಾರು 11 ಗಂಟೆಗೆ ಫ್ಲ್ಯಾಟ್‌ಗೆ ಬಂದಾಗ ಬಾಗಿಲು ಲಾಕ್ ಆಗಿತ್ತು. ನಮ್ಮ ಫ್ಲಾಟ್‌ಗೆ ಒಟ್ಟು ಎರಡು ಕೀಗಳಿದ್ದವು. ಅದರಲ್ಲಿ ಒಂದು ಕೀ ನನ್ನ ಬಳಿ ಇದ್ದರೆ, ಮತ್ತೊಂದು ಕೀ ವೈಶಾಖ್ ಬಳಿ ಇರುತ್ತಿತ್ತು. ನನ್ನ ಬಳಿಯಿದ್ದ ಮತ್ತೊಂದು ಕೀಯನ್ನು ಬಳಸಿ ನಾನು ಬಾಗಿಲು ತೆರೆದು ಒಳಗೆ ಹೋದೆ, ಎಂದು ಕೃಷಿ ಹೇಳಿದ್ದಾರೆ.
ಬಾಗಿಲು ತೆರೆದಾಗ ವೈಶಾಖ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ನಾನೇ ಸೀರೆಯನ್ನು ಕತ್ತರಿಸಿ ಮೃತದೇಹವನ್ನು ಕೆಳಗಿಳಿಸಿದೆ. ನಂತರ ಪೊಲೀಸರಿಗೆ ಹಾಗೂ ವೈಶಾಖ್ ಕುಟುಂಬದವರಿಗೆ ಮಾಹಿತಿ ನೀಡಿದ್ದಾಗಿ ಕೃಷಿ ತಾಪಂಡ ಹೇಳಿದ್ದಾರೆ.
ಪ್ರಕರಣದ ತನಿಖೆ ವೇಳೆ ಪೊಲೀಸರು ಕೃಷಿ ತಾಪಂಡ ಅವರ ಮೊಬೈಲ್ ಫೋನ್ ಪರಿಶೀಲಿಸಿದ್ದಾರೆ. ಮೆಸೇಜ್‌ಗಳು, ಕಾಲ್ ಲಿಸ್ಟ್ ಹಾಗೂ ವಾಟ್ಸಪ್ ಚಾಟ್‌ಗಳನ್ನು ಪರಿಶೀಲಿಸಲಾಗಿದೆ. ಯಾವುದೇ ಅನುಮಾನಾಸ್ಪದ ಸಂದೇಶಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಹೇಳಿಕೆ ಪಡೆದು ಮೊಬೈಲ್ ವಾಪಸ್ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


