ರಾಜ್ಯ

ಬೆಂಗಳೂರು: ಸೂಕ್ತ ದಾಖಲೆ ಇಲ್ಲದ 3 ಕೋಟಿ ಹಣ ಜಪ್ತಿ, ಇಬ್ಬರು ಆರೋಪಿಗಳ ಬಂಧನ!

ಶೆಡ್​​​ವೊಂದರಲ್ಲಿ ದಾಖಲೆ ಇಲ್ಲದೆ ಸಂಗ್ರಹಿಸಲಾಗಿದ್ದ ಸುಮಾರು 3 ಕೋಟಿ ನಗದು ಪತ್ತೆಯಾಗಿದ್ದು, ಬೆಂಗಳೂರು ಪೊಲೀಸರು ಹಣವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಬ್ಯಾಂಕ್‌ ಸಾಲ ತೀರಿಸಲು ಹಣ ತಂದಿರುವುದಾಗಿ ಮಾಲೀಕರು ಹೇಳುತ್ತಿದ್ದಾರೆ.

ಬೆಂಗಳೂರು: ಸೂಕ್ತ ದಾಖಲೆ ಇಲ್ಲದ 3 ಕೋಟಿ ಹಣ ಜಪ್ತಿ, ಇಬ್ಬರು ಆರೋಪಿಗಳ ಬಂಧನ!
Published On :

ಬೆಂಗಳೂರು: ಶೆಡ್​​​ವೊಂದರಲ್ಲಿ ದಾಖಲೆ ಇಲ್ಲದೆ ಸಂಗ್ರಹಿಸಲಾಗಿದ್ದ ಸುಮಾರು 3 ಕೋಟಿ ನಗದು ಪತ್ತೆಯಾಗಿದ್ದು, ಬೆಂಗಳೂರು ಪೊಲೀಸರು ಹಣವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಬ್ಯಾಂಕ್‌ ಸಾಲ ತೀರಿಸಲು ಹಣ ತಂದಿರುವುದಾಗಿ ಮಾಲೀಕರು ಹೇಳುತ್ತಿದ್ದು ಯಾವುದೇ ದಾಖಲೆಗಳನ್ನು ನೀಡದ ಹಿನ್ನೆಲೆ ಪ್ರಕರಣ ಅನುಮಾನಕ್ಕೆ ಕಾರಣವಾಗಿದೆ. ಕುರುಬರಹಳ್ಳಿಯಲ್ಲಿರುವ ಶೆಡ್‌ವೊಂದರಲ್ಲಿ ಈ ಹಣ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ತಾವರೆಕೆರೆ ನಿವಾಸಿ ನಾಗರಾಜ್ ಎಂಬುವರಿಗೆ ಈ ಹಣ ಸೇರಿದ್ದು ಎನ್ನಲಾಗಿದೆ. ನಾಗರಾಜ್ ಅವರ ಸ್ನೇಹಿತ ವೆಂಕಟೇಶ್ ಅವರಿಗೆ ಸೇರಿದ ಶೆಡ್‌ನಲ್ಲಿ ಹಣ ಸಂಗ್ರಹಿಸಲಾಗಿತ್ತು. ಗುಪ್ತ ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಸೂಕ್ತ ದಾಖಲೆ ನೀಡದ ಹಿನ್ನೆಲೆಯಲ್ಲಿ ನಗದನ್ನು ವಶಕ್ಕೆ ಪಡೆದುಕೊಂಡಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ಕುರಿತು ಆದಾಯ ತೆರಿಗೆ (IT) ಇಲಾಖೆಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.