ಕರ್ನಾಟಕದಲ್ಲಿ SIR: ಜೂನ್ 30ರಿಂದ ಮನೆ ಮನೆಗೆ ಭೇಟಿ, ಪರಿಶೀಲನೆ; ಈ ದಾಖಲೆಗಳನ್ನು ಇಟ್ಟುಕೊಳ್ಳಿ...
ಈ ವೇಳೆ ಬಿಎಲ್‌ಒಗಳು ಎಸ್‌ಐಆರ್ ಅರ್ಜಿಯನ್ನು ನೀಡಲಿದ್ದು, ಮತದಾರರು ಅರ್ಜಿಯನ್ನು ಭರ್ತಿ ಮಾಡಿ ಸಹಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕಾಗಿದೆ.

ಬೆಂಗಳೂರು: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಚುನಾವಣಾಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ.
ಈ ವೇಳೆ ಬಿಎಲ್‌ಒಗಳು ಎಸ್‌ಐಆರ್ ಅರ್ಜಿಯನ್ನು ನೀಡಲಿದ್ದು, ಮತದಾರರು ಅರ್ಜಿಯನ್ನು ಭರ್ತಿ ಮಾಡಿ ಸಹಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕಾಗಿದೆ. ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಪರಿಶೀಲನೆ, ತಿದ್ದುಪಡಿ, ಹೊಸ ಮತದಾರರ ಹೆಸರು ಸೇರ್ಪಡೆ, ಮೃತಪಟ್ಟವರು ಹಾಗೂ ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆಯೂ ಈ ಅವಧಿಯಲ್ಲಿ ನಡೆಯಲಿದೆ.
ಚುನಾವಣಾ ಆಯೋಗದ ಸೂಚನೆಯಂತೆ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಯನ್ನು ಸಲ್ಲಿಸುವುದು ಅತ್ಯಂತ ಮುಖ್ಯವಾಗಿದೆ. ಅರ್ಜಿ ಸಲ್ಲಿಸದಿದ್ದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಉಳಿಯದಿರುವ ಸಾಧ್ಯತೆ ಇರುವುದರಿಂದ, ಮತದಾನದ ಹಕ್ಕಿನ ಮೇಲೂ ಪರಿಣಾಮ ಬೀಳಬಹುದು.
ಪರಿಷ್ಕರಣೆ ವೇಳಾಪಟ್ಟಿ
ಜೂನ್ 30 – ಜುಲೈ 29: ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹ
ಆಗಸ್ಟ್ 5: ಕರಡು ಮತದಾರರ ಪಟ್ಟಿ ಪ್ರಕಟಣೆ
ಆಗಸ್ಟ್ 5 – ಸೆಪ್ಟೆಂಬರ್ 4: ಕರಡು ಪಟ್ಟಿಗೆ ಆಕ್ಷೇಪಣೆ ಮತ್ತು ಸಲಹೆ ಸಲ್ಲಿಕೆ
ಆಗಸ್ಟ್ 5 – ಅಕ್ಟೋಬರ್ 3: ಹಕ್ಕು ಮತ್ತು ಆಕ್ಷೇಪಣೆಗಳ ವಿಚಾರಣೆ ಹಾಗೂ ವಿಲೇವಾರಿ
ಅಕ್ಟೋಬರ್ 7: ಅಂತಿಮ ಮತದಾರರ ಪಟ್ಟಿ ಪ್ರಕಟ
ಅಗತ್ಯ ದಾಖಲೆಗಳು
-ಕುಟುಂಬದ ಸದಸ್ಯರ ಗುರುತಿನ ಚೀಟಿ
-ಮತದಾರರ ಗುರುತಿನ ಚೀಟಿ (ವೋಟರ್ ಐಡಿ)
-ಆಧಾರ್ ಕಾರ್ಡ್
-ವಿಳಾಸ ದೃಢೀಕರಣ ದಾಖಲೆ
-ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



