ರಾಜ್ಯ

ನಂದಿಬೆಟ್ಟದ ಹೋಂಸ್ಟೇನಲ್ಲಿ ಯುವತಿ ಶವಪತ್ತೆ; ಪ್ರೇಯಸಿ ಸುರಭಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ನಾ ಕೇರಳ ಮೂಲದ ಅಲಿ?

ಚಿಕ್ಕಬಳ್ಳಾಪುರದ ನಂದಿಬೆಟ್ಟದ ಹೋಮ್‌ಸ್ಟೇ ಒಂದರಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ. ಪ್ರೇಯಸಿ ಸುರಭಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಸಂಜಿತ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ನಂದಿಬೆಟ್ಟದ ಹೋಂಸ್ಟೇನಲ್ಲಿ ಯುವತಿ ಶವಪತ್ತೆ; ಪ್ರೇಯಸಿ ಸುರಭಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ನಾ ಕೇರಳ ಮೂಲದ ಅಲಿ?
ಸುರಭಿ, ಸಂಜೀತ್ ಅಲಿ
Published On :

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ನಂದಿಬೆಟ್ಟದ ಹೋಮ್‌ಸ್ಟೇ ಒಂದರಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ. ಪ್ರೇಯಸಿ ಸುರಭಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಸಂಜಿತ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಅಲಿಯನ್ನು ಚಿಕಿತ್ಸೆಗಾಗಿ ಕೇರಳದ ಕೋಝಿಕೋಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಿದ್ದಾರೆ.

ಬೆಂಗಳೂರು ಮೂಲದ ಸಾಯಿ ಸುರಭಿ ಹಾಗೂ ಕೇರಳದ ಕೋಝಿಕ್ಕೋಡ್ ನಿವಾಸಿ, ಕ್ಯಾಬ್ ಡ್ರೈವರ್ ಸಂಜೀತ್ ಅಲಿ ಕಳೆದ ಶನಿವಾರ ಮುದ್ದೇನಹಳ್ಳಿ ಬಳಿಯ ಹೋಂ ಸ್ಟೇಗೆ ಬಂದು ತಂಗಿದ್ದರು. ಇಂದು ಚೆಕ್-ಔಟ್ ಸಮಯ ಮುಗಿದರೂ ರೂಮ್ ಬಾಗಿಲು ತೆರೆಯದಿದ್ದಾಗ ಸಿಬ್ಬಂದಿ ಬಂದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಸಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಲ್ಲದೆ ಸ್ಥಳದಲ್ಲಿ ಕೆಲವು ಮಾತ್ರೆಗಳು ಪತ್ತೆಯಾಗಿದ್ದು, ವಿಷ ಸೇವಿಸಿರುವ ಸಾಧ್ಯತೆಗಳೂ ದಟ್ಟವಾಗಿವೆ. ರೂಮ್‌ನಲ್ಲಿ ಒಂದು ಡೈರಿ ಸಿಕ್ಕಿದ್ದು, ಅದರಲ್ಲಿ ಹಲವು ವಿಚಾರಗಳನ್ನು ಬರೆಯಲಾಗಿದೆ. ಇದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುರಭಿ ಸಾವಿನ ಬೆನ್ನಲ್ಲೇ ತಾಯಿ ಗೀತಾ ಮಾಧ್ಯಮಗಳ ಎದುರು ಕಣ್ಣೀರು ಹಾಕಿದ್ದು, ಇದೊಂದು ಲವ್ ಜಿಹಾದ್ ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಡ್ರಗ್ಸ್ ಅಡಿಕ್ಟ್ ಮಾಡಿ ಕಿರುಕುಳ ನೀಡುತ್ತಿದ್ದನು ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.