ರಾಜ್ಯ

ಚಪ್ಪಲಿ ಎಸೆತ ಪ್ರಕರಣ: ನನ್ನ ಕುಟುಂಬವನ್ನು ಕೀಳಾಗಿ ನಿಂದಿಸಿದರು; ಸಿದ್ದರಾಮಯ್ಯ ಮುಂದೆ ಪ್ರದೀಪ್ ಈಶ್ವರ್ ಕಣ್ಣೀರು!

ಚಪ್ಪಲಿ ಎಸೆತ ಪ್ರಕರಣ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಣ್ಣೀರು ಹಾಕಿದ ಘಟನೆ ನಡೆದಿದೆ.

ಚಪ್ಪಲಿ ಎಸೆತ ಪ್ರಕರಣ: ನನ್ನ ಕುಟುಂಬವನ್ನು ಕೀಳಾಗಿ ನಿಂದಿಸಿದರು; ಸಿದ್ದರಾಮಯ್ಯ ಮುಂದೆ ಪ್ರದೀಪ್ ಈಶ್ವರ್ ಕಣ್ಣೀರು!
ಪ್ರದೀಪ್ ಈಶ್ವರ್, ಸಿದ್ದರಾಮಯ್ಯ
Published On :

ಚಿಕ್ಕಬಳ್ಳಾಪುರ: ಚಪ್ಪಲಿ ಎಸೆತ ಪ್ರಕರಣ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಣ್ಣೀರು ಹಾಕಿದ ಘಟನೆ ನಡೆದಿದೆ.

ಪ್ರದೀಪ್ ಈಶ್ವರ್ ಇಂದು ನನ್ನನ್ನು ಭೇಟಿಮಾಡಿ, ಕೆಂಪೇಗೌಡ ಜಯಂತಿ ಆಚರಣೆಯ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ತಮ್ಮ ಮೇಲೆ ಚಪ್ಪಲಿ ಎಸೆದು, ತಮ್ಮ ಕುಟುಂಬದವರನ್ನು ನಿಂದಿಸಿದ್ದು ಸೇರಿದಂತೆ ಅಂದು ನಡೆದ ಎಲ್ಲಾ ಘಟನೆಯನ್ನು ವಿವರಿಸಿ, ತಮ್ಮ ನೋವನ್ನು ಹಂಚಿಕೊಂಡರು. ರಾಜಕಾರಣದಲ್ಲಿ ಇಂಥಹ ಘಟನೆಗಳು ಸಾಮಾನ್ಯವಾಗಿದ್ದು, ಇಲ್ಲೇ ಇದ್ದು ಇಂಥವನ್ನು ಎದುರಿಸಬೇಕು. ಇದರಿಂದ ಧೃತಿಗೆಡಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಿದ್ದರಾಮಯ್ಯ ಧೈರ್ಯ ತುಂಬಿದ್ದಾರೆ.

ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೂ ದೂರವಾಣಿ ಕರೆಮಾಡಿ, ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಹೇಳಿದ್ದೇನೆ. ಪೋಲೀಸರ ಸಮ್ಮುಖದಲ್ಲೇ ಆಡಳಿತ ಪಕ್ಷದ ಶಾಸಕನಿಗೆ ಈ ರೀತಿ ಆಗಿರುವುದು ಅಕ್ಷಮ್ಯ. ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಅಗತ್ಯ ಕ್ರಮ ಜರುಗಿಸಬೇಕು ಎಂದು ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.