ರಾಜ್ಯದಲ್ಲಿ ಜುಲೈ 6ರವರೆಗೆ ಭಾರಿ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ IMD ಆರೆಂಜ್ ಅಲರ್ಟ್ ಘೋಷಣೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಜೋರಾಗಿದೆ. ಮಲೆನಾಡು, ಕರಾವಳಿ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ.

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಜೋರಾಗಿದೆ. ಮಲೆನಾಡು, ಕರಾವಳಿ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ.
ಜುಲೈ 6ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು IMD ಆರೆಂಜ್ ಅಲರ್ಟ್ ಘೋಷಿಸಿದೆ. ಈ ಸಂದರ್ಭದಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಪ್ರವಾಸಿಗರು, ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರ, ನದಿಗಳು ಮತ್ತು ಇತರೆ ಜಲಾಶಯಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಲೋ ಮೀಟರ್ ವೇಗದ ಗಾಳಿಯ ಜೊತೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಜುಕೈ 1ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ತುಮಕೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



