ನಾಡಿನ ಖ್ಯಾತ ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ್ ಇನ್ನಿಲ್ಲ!
ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು: ನಾಡಿನ ಹೆಮ್ಮೆಯ ಹಿರಿಯ ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ್ (KT Shivaprasad) ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವರ್ಷ ವಯಸ್ಸಾಗಿತ್ತು.
ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ರೈತ ಹಾಗೂ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡಿದ್ದ ಕೆ. ಟಿ. ಶಿವಪ್ರಸಾದ್ ಹಾಸನ ಜಿಲ್ಲೆಯ ಕಾರ್ಲೆಯ ಖ್ಯಾತ ಉದ್ಯಮಿ ಎಲ್. ಟಿ. ಕಾರ್ಲೆ ಅವರ ಪುತ್ರರಾಗಿದ್ದಾರೆ.
1947ರಲ್ಲಿ ಕೊಡಗಿನ ಮಡಿಕೇರಿ (ಮರ್ಕಾರ) ತಾಲೂಕಿನ ಬಡ ಕೃಷಿ ಕುಟುಂಬವೊಂದರಲ್ಲಿ ಜನಿಸಿದ ಶಿವಪ್ರಸಾದ್ ಅವರಿಗೆ ಬಾಲ್ಯದಿಂದಲೇ ಚಿತ್ರಕಲೆಯತ್ತ apparel ಆಸಕ್ತಿ ಇತ್ತು. ಆದರೆ ಆ ಕಾಲದಲ್ಲಿ ಚಿತ್ರಕಲೆಗೆ ಅಷ್ಟಾಗಿ ಮನ್ನಣೆ ಇರದ ಕಾರಣ, ಕುಟುಂಬದ ಇಚ್ಛೆಯಂತೆ ಅವರು ಇಂಜಿನಿಯರಿಂಗ್ ಕಾಲೇಜು ಸೇರಬೇಕಾಯಿತು.
ಆದರೆ ಕಲೆಯ ಮೇಲಿದ್ದ ಅದಮ್ಯ ಒಲವಿನಿಂದಾಗಿ ಇಂಜಿನಿಯರಿಂಗ್ ಅಧ್ಯಯನವನ್ನು ಅರ್ಧಕ್ಕೇ ಬಿಟ್ಟು, ಮುಂಬೈನ ಪ್ರತಿಷ್ಠಿತ 'ಸರ್ ಜೆ.ಜೆ. ಸ್ಕೂಲ್ ಆಫ್ ಆರ್ಟ್' ಸೇರಿದರು. ಅಲ್ಲಿ 1973ರಲ್ಲಿ ಚಿತ್ರಕಲೆಯಲ್ಲಿ ಡಿಪ್ಲೊಮಾ ಪದವಿ ಪಡೆದರು. ನಂತರದ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡರು.
ಬ್ರಿಟನ್‌ನ ಶ್ರೇಷ್ಠ ಮಾಡರ್ನಿಸ್ಟ್ ಲುಸಿಯನ್ ಫ್ರಾಯ್ಡ್ ಅವರಿಗೆ ಹೋಲಿಸಲ್ಪಡುತ್ತಿದ್ದ ಕೆ.ಟಿ. ಶಿವಪ್ರಸಾದ್ ಅವರ ಕಲಾಕೃತಿಗಳು ದೇಶ-ವಿದೇಶಗಳಲ್ಲಿ ಅಪಾರ ಪ್ರಶಂಸೆ ಗಳಿಸಿವೆ. 1976 ರಿಂದ ಬೆಂಗಳೂರು, ಮೈಸೂರು, ಮುಂಬೈ ಮತ್ತು ನವದೆಹಲಿಗಳಲ್ಲಿ ಇವರ ಹಲವು ಏಕವ್ಯಕ್ತಿ ಪ್ರದರ್ಶನಗಳು ನಡೆದಿವೆ. ಮುಂಬೈನ ಜಹಾಂಗೀರ್ ಆರ್ಟ್ ಗ್ಯಾಲರಿ, ಚೆನ್ನೈನ ಸಾಕ್ಷಿ ಗ್ಯಾಲರಿ ಹಾಗೂ ನವದೆಹಲಿಯ ಆರ್ಟ್ ಟುಡೇಗಳಲ್ಲಿ ಇವರ ಕಲಾ ಪ್ರದರ್ಶನಗಳು ಕಲಾ ರಸಿಕರ ಮನಗೆದ್ದಿದ್ದವು.
ಜೊತೆಗೆ ಭೋಪಾಲ್ ಬಿನ್ನಾಲೆ (1988), ಬಾಂಬೆ ಆರ್ಟ್ ಸೊಸೈಟಿ ಶತಮಾನೋತ್ಸವ ಪ್ರದರ್ಶನ (1989) ಹಾಗೂ ಹಾಂಗ್‌ಕಾಂಗ್ ಗ್ಯಾಲರಿಗಳಲ್ಲೂ (1996) ಇವರ ಕಲಾಕೃತಿಗಳು ಪ್ರದರ್ಶನಗೊಂಡಿದ್ದವು. 1996ರಲ್ಲೇ ಜಹಾಂಗೀರ್ ಆರ್ಟ್ ಗ್ಯಾಲರಿಯಲ್ಲಿ ನಡೆದ ಸಮಕಾಲೀನ ಭಾರತೀಯ ಕಲಾವಿದರ ಪ್ರದರ್ಶನದಲ್ಲೂ ಭಾಗವಹಿಸಿದ್ದರು.
ಪ್ರಶಸ್ತಿ ಪುರಸ್ಕಾರಗಳು: ಕಲಾ ಜಗತ್ತಿಗೆ ಇವರು ನೀಡಿದ ಮಹೋನ್ನತ ಕೊಡುಗೆಯನ್ನು ಗೌರವಿಸಿ ಕರ್ನಾಟಕ ಸರ್ಕಾರವು 2001ರಲ್ಲಿ ಇವರಿಗೆ ಪ್ರತಿಷ್ಠಿತ 'ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ' ನೀಡಿ ಗೌರವಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



