ಗದಗ: ತನ್ನ ಪ್ರೇಯಸಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಫಾರೂಕ್ ಕತ್ತು ಸೀಳಿ ಕೊಂದ ಯುವಕ!
ಲಕ್ಷ್ಮೇಶ್ವರ ಹೊರವಲಯದ ಜಮೀನಲ್ಲಿ ಯುವಕನೋರ್ವನನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೊಲೆಯ ಜಾಡು ಹಿಡಿದು ಬೆನ್ನತ್ತಿದ ಪೊಲೀಸರಿಗೆ ಇದೀಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಗದಗ: ಲಕ್ಷ್ಮೇಶ್ವರ ಹೊರವಲಯದ ಜಮೀನಲ್ಲಿ ಯುವಕನೋರ್ವನನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೊಲೆಯ ಜಾಡು ಹಿಡಿದು ಬೆನ್ನತ್ತಿದ ಪೊಲೀಸರಿಗೆ ಇದೀಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. 25 ವರ್ಷದ ಫಾರೂಕ್ ಸನದಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೊಲೆಗೆ ಕಾರಣ ನಿಶ್ಚಿತಾರ್ಥ ಎಂದು ತಿಳಿದುಬಂದಿದೆ.
ಹೌದು... ಫಾರೂಕ್ ಮೂರು ತಿಂಗಳ ಹಿಂದೆ ಯುವತಿ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದನು. ಇದೇ ಕಾರಣಕ್ಕೆ ಫಾರೂಕ್ ನನ್ನು ಯುವತಿಯ ಪ್ರಿಯಕರ ದಾವಲಸಾಬ್ ತನ್ನ ಸ್ನೇಹಿತ ಮಕ್ಕಬೂಲ್ ಸಾಬ್ ಜೊತೆ ಸೇರಿಕೊಂಡು ಕೊಲೆ ಮಾಡಿದ್ದಾನೆ.
ತನ್ನ ಪ್ರೇಯಸಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ವಿಷಯ ತಿಳಿದ ದಾವಲಸಾಬ್, ಮಾತನಾಡಬೇಕೆಂದು ಗದಗ ಜಿಲ್ಲೆ ಲಕ್ಷ್ಮೇಶ್ವರ ಶಿಗ್ಲಿ ಗ್ರಾಮದ ನಿವಾಸಿಯಾದ ಫಾರೂಕ್ ನನ್ನು ಜಮೀನಿಗೆ ಕರೆಯಿಸಿಕೊಂಡಿದ್ದನು. ಈ ವೇಳೆ ಮಾತಿಗೆ ಮಾತು ಬೆಳೆದು ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ ಕೋಪದಲ್ಲಿ ದಾವಲಸಾಬ್ ಕೊಡಲಿಯಿಂದ ಫಾರೂಕ್ ನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



