US-Israel-Iran War: ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಕ್ರಮ; ಕೇಂದ್ರ ಸರ್ಕಾರ ಭರವಸೆ
ಪ್ರಧಾನಮಂತ್ರಿ ನರೇಂದ್ರಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಇಂತಹ ಸಂಕಷ್ಟ ಪರಿಸ್ಥಿತಿಗಳನ್ನು ಹಿಂದೆಯೂ ಯಶಸ್ವಿಯಾಗಿ ಎದುರಿಸಿ, ಯುದ್ಧಪೀಡಿತ ರಾಷ್ಟ್ರಗಳಿಂದ ಭಾರತೀಯರನ್ನು ಸುರಕ್ಷಿತವಾಗಿ ವಾಯುಮಾರ್ಗದ ಮೂಲಕ ಸ್ಥಳಾಂತರಿಸಿದೆ.

ಮೈಸೂರು: ಗಲ್ಫ್ ಪ್ರದೇಶದ ಸಂಘರ್ಷಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರು ಸೇರಿದಂತೆ ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ವಾಪಸು ಕರೆತರುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಯುದ್ಧ ಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರು ಸೇರಿದಂತೆ ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ವಾಪಸು ಕರೆತರಲು ಕೇಂದ್ರ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಇಂತಹ ಸಂಕಷ್ಟ ಪರಿಸ್ಥಿತಿಗಳನ್ನು ಹಿಂದೆಯೂ ಯಶಸ್ವಿಯಾಗಿ ಎದುರಿಸಿ, ಯುದ್ಧಪೀಡಿತ ರಾಷ್ಟ್ರಗಳಿಂದ ಭಾರತೀಯರನ್ನು ಸುರಕ್ಷಿತವಾಗಿ ವಾಯುಮಾರ್ಗದ ಮೂಲಕ ಸ್ಥಳಾಂತರಿಸಿದೆ.
ಅದೇ ರೀತಿ ಈ ಬಾರಿಯೂ ಜನರನ್ನು ಸುರಕ್ಷಿತವಾಗಿ ವಾಪಸು ಕರೆತರಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಪ್ರಧಾನಮಂತ್ರಿಗಳು ಈಗಾಗಲೇ ಅಗತ್ಯ ಕ್ರಮಗಳನ್ನು ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ.
ಯುದ್ಧಸಮಾನ ಪರಿಸ್ಥಿತಿ ಎದುರಿಸುತ್ತಿರುವ ರಾಷ್ಟ್ರಗಳಲ್ಲಿ, ವಿಶೇಷವಾಗಿ ದುಬೈ ಸೇರಿದಂತೆ ಹಲವು ಸ್ಥಳಗಳಲ್ಲಿ ಸಿಲುಕಿರುವ ಕನ್ನಡಿಗರೊಂದಿಗೆ ನಾನು ವೈಯಕ್ತಿಕವಾಗಿ ಸಂಪರ್ಕದಲ್ಲಿದ್ದೇನೆ. ಅವರೆಲ್ಲರೂ ಸುರಕ್ಷಿತರಾಗಿದ್ದಾರೆ. ಆತಂಕಪಡುವ ಅಗತ್ಯವಿಲ್ಲ. ಅವರನ್ನು ಸುರಕ್ಷಿತವಾಗಿ ವಾಪಸು ಕರೆತರಲಾಗುತ್ತದೆ ಎಂದು ಆತಂಕದಲ್ಲಿರುವ ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



