ಬೆಂಗಳೂರಿನ ಗಾಯತ್ರಿ ನಗರದ ಮನೆಯಲ್ಲಿ ಬೆಂಕಿ ದುರಂತ: ಮಹಿಳೆ ಸಾವು, ಮೂವರ ರಕ್ಷಣೆ
ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಮಗನನ್ನು ರಕ್ಷಿಸಿದ್ದಾರೆ. ಗಾಯಗೊಂಡವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರು: ನಗರದ ಗಾಯತ್ರಿ ನಗರದಲ್ಲಿರುವ ಕಂಟ್ರ್ಯಾಕ್ಟರ್ ರಮೇಶ್ ಬಾಬು ಅವರ ನಾಲ್ಕು ಅಂತಸ್ತಿನ ಮನೆಯಲ್ಲಿ ಮೂರನೇ ಮಹಡಿಯ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಪರಿಣಾಮ ರಮೇಶ್ ಬಾಬು ಅವರ ಪತ್ನಿ 53 ವರ್ಷದ ಸವಿತಾ ಸಜೀವ ದಹನಗೊಂಡಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಮಗನನ್ನು ರಕ್ಷಿಸಿದ್ದಾರೆ. ಗಾಯಗೊಂಡವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಮಲ್ಲೇಶ್ವರಂ ಎಸಿಪಿ ವೇಣುಗೋಪಾಲ್ ಹಾಗೂ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದನ್ನು ತಿಳಿಯಲು ತನಿಖೆ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



