ರಾಜ್ಯ

ದಲಿತರ ಭಕ್ತಿಯಿಂದ ಬ್ರಾಹ್ಮಣರಿಗೆ ಲಾಭ; ಹವನ ಮಾಡಿಸುವವರು ನಾವೇ- ಕಾಣಿಕೆ ಕೊಡುವುದು ನಾವೇ; ಕೆಳವರ್ಗ ಅಂತ ನಾವ್ಯಾಕೆ ಹೇಳಿಕೊಳ್ಳಬೇಕು?

ಇತ್ತೀಚಿನ ದಿನಗಳಲ್ಲಿ ಪೂಜೆ, ಹೋಮ ಮಾಡಿಸುವವರು ನಾವೇ. ಹವನ ಮಾಡಿಸುವವರು ನಾವೇ. ಕಾಣಿಕೆ ಕೊಡುವುದು ನಾವೇ. ಇದನ್ನು ಅರ್ಥ ಮಾಡಿಕೊಳ್ಳಬೇಕು. ವಾಸ್ತವ ಸತ್ಯವನ್ನು ಜನರಿಗೆ ಅರ್ಥ ಮಾಡಿಸಬೇಕು

ದಲಿತರ ಭಕ್ತಿಯಿಂದ ಬ್ರಾಹ್ಮಣರಿಗೆ ಲಾಭ; ಹವನ ಮಾಡಿಸುವವರು ನಾವೇ- ಕಾಣಿಕೆ ಕೊಡುವುದು ನಾವೇ; ಕೆಳವರ್ಗ ಅಂತ ನಾವ್ಯಾಕೆ ಹೇಳಿಕೊಳ್ಳಬೇಕು?
ಕೆ.ಎನ್ ರಾಜಣ್ಣ
Published On :

ತುಮಕೂರು: ದಲಿತರಲ್ಲಿ ಹೋಮ-ಹವನ ಮಾಡಿಸುವುದು ಹೆಚ್ಚಾಗಿದೆ. ದೈವಭಕ್ತಿಯ ಜಾಸ್ತಿಯಾಗಿದೆ. ಇದರಿಂದ ಬ್ರಾಹ್ಮಣರು ಲಾಭ ಮಾಡಿಕೊಳ್ಳುತ್ತಾರೆ ಇದು ಸರಿ-ತಪ್ಪು ಎಂದು ಹೇಳುವುದಲ್ಲ, ನಮಗೆ ನಾವೇ ಅರ್ಥ ಮಾಡಿಕೊಳ್ಳಬೇಕಿದೆ ಎನ್ನುವ ಮೂಲಕ ಮಾಜಿ ಸಚಿವ ಹಾಗೂ ಮಧುಗಿರಿ ಶಾಸಕ ಕೆ.ಎನ್‌.ರಾಜಣ್ಣ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಚರಕ ಚಾರಿಟೆಬಲ್ ಟ್ರಸ್ಟ್ ತುಮಕೂರು ವತಿಯಿಂದ ನಗರದ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಹಾಗೂ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಪೂಜೆ, ಹೋಮ ಮಾಡಿಸುವವರು ನಾವೇ. ಹವನ ಮಾಡಿಸುವವರು ನಾವೇ. ಕಾಣಿಕೆ ಕೊಡುವುದು ನಾವೇ. ಇದನ್ನು ಅರ್ಥ ಮಾಡಿಕೊಳ್ಳಬೇಕು. ವಾಸ್ತವ ಸತ್ಯವನ್ನು ಜನರಿಗೆ ಅರ್ಥ ಮಾಡಿಸಬೇಕು. ವಾಸ್ತವಿಕತೆಯಿಂದ ದೂರ ಹೋಗಬಾರದು. ವಾಸ್ತವದ ಸತ್ಯ ಸಂಗತಿಗಳನ್ನು ನಿರ್ಭೀತಿಯಿಂದ ಹೇಳಿ ಜನರಲ್ಲಿ ಅರಿವು ಮೂಡಿಸಬೇಕು. ಸತ್ಯ ಹೇಳುವುದನ್ನು ಎಲ್ಲ ಯುವಕರು ಕಲಿಯಬೇಕು. ಇತಿಹಾಸ ಅರಿಯದೆ ಇತಿಹಾಸ ನಿರ್ಮಾಣ ಸಾಧ್ಯವಿಲ್ಲ ಎಂದು ಹೇಳಿದರು.

ನಮಗೆ ನಾವೇ ಕೆಳವರ್ಗ ಅಂತ ಯಾಕೆ ಹೇಳಿಕೊಳ್ಳಬೇಕು. ಈ ವಿಚಾರವನ್ನು ನಾನು ಒಪ್ಪುವುದಿಲ್ಲ. ನಾವು ಕೆಳವರ್ಗ ಮತ್ತು ಮೇಲ್ವರ್ಗ ಅಂತ ಹೇಳಿಕೊಳ್ಳುವುದರ ಬದಲು ಹಿಂದುಳಿದವರು ಮತ್ತು ಮುಂದುವರೆದವರು ಅಂತ ಹೇಳಿಕೊಳ್ಳಲಿ. ಯಾರೆಲ್ಲ ಬಡವರು ಇರುತ್ತಾರೆ. ಅಸಹಾಯಕರು ಇರುತ್ತಾರೆ

ದನಿ ಇಲ್ಲದವರು ಇರುತ್ತಾರೆ. ಶೋಷಿತ ಸಮುದಾಯ ಇರುತ್ತದೆ, ಅವರು ಯಾವತ್ತೂ ಕೂಡ ಇನ್ನೊಬ್ಬರಿಗೆ ಮೋಸ ಮಾಡುವಂತಹ, ಅನ್ಯಾಯ ಮಾಡುವಂತಹ, ಸುಳ್ಳು ಹೇಳುವಂತಹ ಕೆಲಸವನ್ನು ಮಾಡುವುದಿಲ್ಲ. ನಾವು ಬೇರೆಯವರಿಗಿಂತ ಬುದ್ದಿವಂತರಿದ್ದೇವೆ. ಹಾಗಾಗಿ ನಾವ್ಯಾಕೆ ಕೆಳವರ್ಗ ಅಂತ ಹೇಳಿಕೊಳ್ಳಬೇಕು ಇದು ಸರಿಯಾದ ಚಿಂತನೆಯಲ್ಲ. ಕೆಳವರ್ಗ ಎನ್ನುವುದನ್ನು ನಾನು ಒಪ್ಪುವುದಿಲ್ಲ. ಮುಂದೆ ಇಂತಹ ಪದಗಳನ್ನು ಬಳಸಬಾರದು ಎಂದು ಕಿವಿಮಾತು ಹೇಳಿದರು.

ನಾವು ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡೋಣ.ಬೇರೆಯವರಿಗೆ ತೊಂದರೆ ಕೊಡುವುದು ಬೇಡ. ನಮ್ಮ ಮೇಲೆ ಯಾರಾದರೂ ದಬ್ಬಾಳಿಕೆ, ದೌರ್ಜನ್ಯ ಮಾಡುವಂತಹ ಸಂದರ್ಭಗಳು ಬಂದಾಗ ನಾವೆಲ್ಲರೂ ಒಗ್ಗಟ್ಟಾಗಿ ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡೋಣ. ಕಾನೂನನ್ನು ದುರುಪಯೋಗಪಡಿಸಿಕೊಳ್ಳುವುದು ಬೇಡ. ದಲಿತ ಸಂಘಟನೆಯ ಯುವಕರೇ ಬೇರೆಯವರ ಪರ ಬಂದು ಬಿಡುತ್ತಾರೆ.

ಸ್ವಾರ್ಥಕ್ಕೋಸ್ಕರ ಈ ರೀತಿ ಮಾಡುವುದು ಬೇಡ. ಇಂತಹ ಘಟನೆಗಳು ಆಗಬಾರದು. ಅಕ್ಷರ ಜ್ಞಾನದ ಆಧಾರದ ಮೇಲೆ ನಮ್ಮ ಸಮುದಾಯಕ್ಕೆ ನ್ಯಾಯ ಒದಗಿಸುವಂತಹ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.

ಸಹಕಾರ ಸಂಸ್ಥೆಗಳು ಕೆಲವರ ಹಿಡಿತದಲ್ಲಿದ್ದವು. ಪಟ್ಟಭದ್ರರು ಮಾತ್ರ ಸಾಲ ಪಡೆಯುತ್ತಿದ್ದರು. ನಾನು ಸಹಕಾರ ಸಚಿವನಾಗಿದ್ದಾಗ ಹಲವು ತಿದ್ದುಪಡಿ ಮಾಡಿ, ಎಲ್ಲ ವರ್ಗಗಳಿಗೂ ಅವಕಾಶ ಕಲ್ಪಿಸಲಾಯಿತು. ಗ್ರಾಮ ಪಂಚಾಯಿತಿ ಮಾದರಿಯಲ್ಲಿ ಸಹಕಾರ ಸಂಘ, ಹಾಲು ಉತ್ಪಾದಕರ ಒಕ್ಕೂಟಗಳಲ್ಲಿ ಮೀಸಲಾತಿ ಜಾರಿಗೆ ಕಾಯ್ದೆ ರೂಪಿಸಲಾಗಿದೆ. ಇದು ಹೆಚ್ಚು ಅನುಷ್ಠಾನ ಆಗಬೇಕು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.