3 ಮಹಡಿಗಳಿಗಿಂತ ಎತ್ತರದ ಕಟ್ಟಡಗಳಿಗೆ ಹಸಿ-ಒಣ ಕಸ ಸಂಗ್ರಹಣೆಗೆ ಪ್ರತ್ಯೇಕ Dustbin ಸ್ಥಾಪನೆ ಕಡ್ಡಾಯ..!
ನಗರದಲ್ಲಿ ಮೂರು ಮಹಡಿಗಳಿಗಿಂತ ಹೆಚ್ಚು ಇರುವ ಕಟ್ಟಡಗಳಲ್ಲಿ ಹಸಿ ಹಾಗೂ ಒಣ ತ್ಯಾಜ್ಯ ಸಂಗ್ರಹಕ್ಕಾಗಿ ಪ್ರತ್ಯೇಕ ಬಿನ್ಗಳ ಸ್ಥಾಪನೆಯನ್ನು ಕಡ್ಡಾಯ ಮಾಡಲಾಗಿದ್ದು, ತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು: ನಗರದಲ್ಲಿ ಮೂರು ಮಹಡಿಗಳಿಗಿಂತ ಹೆಚ್ಚು ಇರುವ ಕಟ್ಟಡಗಳಲ್ಲಿ ಹಸಿ ಹಾಗೂ ಒಣ ತ್ಯಾಜ್ಯ ಸಂಗ್ರಹಕ್ಕಾಗಿ ಪ್ರತ್ಯೇಕ ಬಿನ್ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸೂಚನೆ ನೀಡಿದೆ.
ಪೂರ್ವ ವಲಯದಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಮಾತನಾಡಿದರು.
ನಗರದಲ್ಲಿ ಮೂರು ಮಹಡಿಗಳಿಗಿಂತ ಹೆಚ್ಚು ಇರುವ ಕಟ್ಟಡಗಳಲ್ಲಿ ಹಸಿ ಹಾಗೂ ಒಣ ತ್ಯಾಜ್ಯ ಸಂಗ್ರಹಕ್ಕಾಗಿ ಪ್ರತ್ಯೇಕ ಬಿನ್ಗಳ ಸ್ಥಾಪನೆಯನ್ನು ಕಡ್ಡಾಯ ಮಾಡಲಾಗಿದ್ದು, ತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬೋರ್ವೆಲ್ ರಸ್ತೆಯ ಅಗಲೀಕರಣದ ವಿಷಯಕ್ಕೆ ಪ್ರತಿಕ್ರಿಯಿಸಿ, ರಸ್ತೆ ವಿಸ್ತರಣೆಗಾಗಿ ಕಾಯ್ದಿರಿಸಿದ ಆಸ್ತಿಗಳನ್ನು ಬಿಇಸಿಸಿ ಸ್ವಾಧೀನಪಡಿಸಿಕೊಳ್ಳಬೇಕು. ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು. ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೆಆರ್ ಪುರಂ ವಿಧಾನಸಭಾ ಕ್ಷೇತ್ರದೊಳಗಿನ ಪ್ರಮುಖ ರಸ್ತೆಗಳನ್ನು ಪರಿಶೀಲಿಸಲು ಮತ್ತು ಪಾದಚಾರಿ ಮಾರ್ಗಗಳಿಗೆ ದುರಸ್ತಿ ಮತ್ತು ಹೊಸ ಪಾದಚಾರಿ ಮಾರ್ಗಗಳನ್ನು ನಿರ್ಮಿಸಬೇಕಾದ ಪ್ರದೇಶಗಳನ್ನು ಗುರುತಿಸುವ ಪಟ್ಟಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಎಇಸಿಎಸ್ ಲೇಔಟ್ನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣಗಳನ್ನು ತೆಗೆದುಹಾಕುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಸ್ತೆ ಬದಿಗಳಲ್ಲಿ, ಖಾಲಿ ಸ್ಥಳಗಳಲ್ಲಿ ತ್ಯಾಜ್ಯವನ್ನು ಸುರಿಯಲಾಗುತ್ತಿದೆ ಮತ್ತು ಮನೆ-ಮನೆಗೆ ತ್ಯಾಜ್ಯ ಸಂಗ್ರಹಣೆಯಲ್ಲಿನ ಅಕ್ರಮಗಳ ಬಗ್ಗೆ ನಾಗರಿಕರ ದೂರುಗಳಿಗೆ ಪ್ರತಿಕ್ರಿಯಿಸಿ, ಸಮಸ್ಯೆಯಿರುವ ಪ್ರದೇಶಗಳನ್ನು ಗುರುತಿಸಿ ತ್ಯಾಜ್ಯ ನಿರ್ವಹಣಾ ಸಮಸ್ಯೆಗಳನ್ನು ವ್ಯವಸ್ಥಿತವಾಗಿ ಪರಿಹರಿಸಲು ಸೂಕ್ಷ್ಮ ಯೋಜನೆಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಒಟ್ಟು 150 ಅಹವಾಲುಗಳು ಸ್ವೀಕರಿಸಲ್ಪಟ್ಟಿದ್ದು, ಸಂಬಂಧಿತ ಅಧಿಕಾರಿಗಳಿಗೆ ತಕ್ಷಣ ಸ್ಪಂದಿಸುವಂತೆ ಸೂಚನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



