ಪಡಿತರ ಅಕ್ಕಿ ಅಕ್ರಮ ಸಾಗಾಟ: ಬಳ್ಳಾರಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 2 ತಿಂಗಳಲ್ಲಿ 50ಕ್ಕೂ ಹೆಚ್ಚು ಮಂದಿ ಬಂಧನ
ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುವುದರಿಂದ, ಆರೋಪಿಗಳು ಈ ಅಕ್ಕಿಯನ್ನು ನೆರೆಯ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಸಾಗಿಸುತ್ತಿದ್ದರು.

ಬಳ್ಳಾರಿ: ಸಾರ್ವಜನಿಕ ವಿತರಣೆ ವ್ಯವಸ್ಥೆ (PDS) ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಪೊಲೀಸರು, ಕಳೆದ ಎರಡು ತಿಂಗಳಲ್ಲಿ 50ಕ್ಕೂ ಹೆಚ್ಚು ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ,
ಸರ್ಕಾರದ ಕಲ್ಯಾಣ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಧಾನ್ಯಗಳನ್ನು ಅಕ್ರಮವಾಗಿ ಬೇರೆಡೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ಬಳ್ಳಾರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ವಿವಿಧ ದಾಳಿಗಳ ವೇಳೆ ಸುಮಾರು 5 ಟನ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುವುದರಿಂದ, ಆರೋಪಿಗಳು ಈ ಅಕ್ಕಿಯನ್ನು ನೆರೆಯ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಸಾಗಿಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಪಡಿತರಅಕ್ಕಿ ಅಕ್ರಮ ಸಾಗಣೆ ಗಂಭೀರ ಅಪರಾಧವಾಗಿದೆ. ಇಂತಹ ಅಕ್ರಮಗಳು ಆರ್ಥಿಕವಾಗಿ ದುರ್ಬಲ ವರ್ಗಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿ ಬಂಧನ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಅಕ್ರಮದಲ್ಲಿ ಸಂಘಟಿತ ಜಾಲದ ಕೈವಾಡ ಇರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಹಣಕಾಸು ವ್ಯವಹಾರಗಳು ಮತ್ತು ಸರಬರಾಜು ಸರಪಳಿಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಾರ್ವಜನಿಕರು ಇಂತಹ ಘಟನೆಗಳ ಬಗ್ಗೆ ಎಚ್ಚರಿಕೆಯಿಂದಿದ್ದು, ಯಾವುದೇ ಮಾಹಿತಿ ಇದ್ದರೆ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ತಿಳಿಸಲು ಅಧಿಕಾರಿಗಳು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



