ಹಾಸನ ನಗರಪಾಲಿಕೆ AEE ಮನೆ ಮೇಲೆ ʻಲೋಕಾಯುಕ್ತʼ ದಾಳಿ: ಬಾಗಿಲು ತೆರೆಯದೇ ಕಳ್ಳಾಟ; ಬಿಲ್ಡಿಂಗ್ ಹತ್ತಿ ಕಿಟಕಿ ಬಡಿದರು ನೋ ರೆಸ್ಪಾನ್ಸ್! Video
ಲೋಕಾಯುಕ್ತ ಅಧಿಕಾರಿಗಳು ಬರುತ್ತಿದ್ದಂತೆ ಮನೆಯ ಲೈಟ್ ಆಫ್ ಮಾಡಿದ್ದು ಮನೆಯ ಬಾಗಿಲು ತೆರೆಯದ ಸತ್ಯನಾರಾಯಣ ಅಧಿಕಾರಿಗಳನ್ನ ಸತಾಯಿಸಿದ್ದಾರೆ.

ಹಾಸನ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ಹಾಸನ ನಗರದ ರಕ್ಷಣಾಪುರಂನಲ್ಲಿರುವ ಹಾಸನ ಮಹಾನಗರಪಾಲಿಕೆ ಎಇಇ ಎಂ.ಸಿ ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್‌ಪಿ ಸುರೇಶ್ ಕುಮಾರ್, ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆದಿದ್ದು ಬೆಳಗ್ಗೆ 5.15 ಕ್ಕೆ ಸತ್ಯನಾರಾಯಣ ಅವರ ಮನೆಯೊಳಗೆ ಪರಿಶೀಲನೆ ಮಾಡಲು ಲೋಕಾಯುಕ್ತ ಅಧಿಕಾರಿಗಳು ಬಂದು ಕಾಯುತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬರುತ್ತಿದ್ದಂತೆ ಮನೆಯ ಲೈಟ್ ಆಫ್ ಮಾಡಿದ್ದು ಮನೆಯ ಬಾಗಿಲು ತೆರೆಯದ ಸತ್ಯನಾರಾಯಣ ಅಧಿಕಾರಿಗಳನ್ನ ಸತಾಯಿಸಿದ್ದಾರೆ. ಸತತ 2 ಗಂಟೆಯಿಂದ ಮನೆಯ ಬಾಗಿಲು ತೆಗೆಸಲು ಲೋಕಾಯುಕ್ತ ಅಧಿಕಾರಿಗಳು ಹರಸಾಹಸಡಪಡುತ್ತಿದ್ದಾರೆ.
ಬಿಲ್ಡಿಂಗ್ ಹತ್ತಿ ಕಿಟಕಿ ಬಡಿದು, ಕೂಗಿದರು ಸತ್ಯನಾರಾಯಣ ಬಾಗಿಲು ತೆರೆಯುತ್ತಿಲ್ಲ. ಮನೆಯ ಸುತ್ತಲೂ ಓಡಾಡಿ ಬಾಗಿಲು ತೆರಸಲು ಪ್ರಯತ್ನಿಸುತ್ತಿದ್ದು ಸತತ 2 ಗಂಟೆಗೂ ಹೆಚ್ಚು ಕಾಲದಿಂದ ಮನೆಯ ಬಳಿಯೇ ಬೀಡುಬಿಟ್ಟಿದ್ದಾರೆ. ಸತ್ಯನಾರಾಯಣ ಫೋನ್ ಕೂಡ ಸ್ವಿಚ್ ಆಫ್ ಮಾಡಿದ್ದಾರೆ.
ಇನ್ನೂ ಸತ್ಯನಾರಾಯಣ ಬಾಗಿಲು ತೆರೆಯದೇ ಸತಾಯಿಸುತ್ತಿರುವ ಕಾರಣ ಸ್ಥಳಕ್ಕೆ ಲೋಕಾಯುಕ್ತ ಎಸ್ಪಿ ನಂದಿನಿ ಕೂಟ ಭೇಟಿ ನೀಡಿ ಪರಿಸ್ಥಿತಿ ಮೇಲ್ವಿಚಾರಣೆ ನಡೆಸಿದ್ದಾರೆ. ಬಳಿಕ ಅಧಿಕಾರಿಗಳಿಂದ ಮಾಹಿತಿ ಪಡೆದು ಅಲ್ಲಿಂದ ತೆರಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


