ರಾಜ್ಯ

ರಾಜ್ಯ ಬಜೆಟ್ 2026: ಹಣಕಾಸು ಇಲಾಖೆ ಅಧಿಕಾರಿಗಳಿಂದ ಬಜೆಟ್ ಪ್ರತಿ ಸಿಎಂಗೆ ಹಸ್ತಾಂತರ; ವಿಧಾನಸೌಧಕ್ಕೆ ತೆರಳಿದ ಸಿಎಂ

ಇದೀಗ ಕಾವೇರಿ ನಿವಾಸದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಪು ಸೂಟ್​ಕೇಸ್​ನೊಂದಿಗೆ ವಿಧಾನಸೌಧಕ್ಕೆ ಆಗಮಿಸಿದ್ದು. ಇನ್ನು ಕೆಲವೇ ಕ್ಷಣಗಳಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಲಿದೆ.

ರಾಜ್ಯ ಬಜೆಟ್ 2026: ಹಣಕಾಸು ಇಲಾಖೆ ಅಧಿಕಾರಿಗಳಿಂದ ಬಜೆಟ್ ಪ್ರತಿ ಸಿಎಂಗೆ ಹಸ್ತಾಂತರ; ವಿಧಾನಸೌಧಕ್ಕೆ ತೆರಳಿದ ಸಿಎಂ
ಬಜೆಟ್ ಪ್ರತಿಯೊಂದಿಗೆ ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ರಾಜ್ಯ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದ್ದು, 2026-27ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಬೆಳಗ್ಗೆ ಹಸ್ತಾಂತರಿಸಿದರು.

ಇದೀಗ ಕಾವೇರಿ ನಿವಾಸದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಪು ಸೂಟ್​ಕೇಸ್​ನೊಂದಿಗೆ ವಿಧಾನಸೌಧಕ್ಕೆ ಆಗಮಿಸಿದ್ದು. ಇನ್ನು ಕೆಲವೇ ಕ್ಷಣಗಳಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಲಿದೆ.

ಬೆಳಗ್ಗೆ 10:15 ರಿಂದ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ಮಾಡಲಿದ್ದಾರೆ. ಬಜೆಟ್‌ ಗಾತ್ರ 3.75 ಲಕ್ಷ ಜೋಟಿ ರೂ.ನಿಂದ 3.80 ಲಕ್ಷ ಕೋಟಿ ರೂ.ಗಳ ವರೆಗೆ ಇರಲಿದೆ ಎಂದು ಹೇಳಲಾಗುತ್ತಿದೆ.

ಈ ಪೈಕಿ ಗ್ಯಾರಂಟಿ ಯೋಜನೆಗಳ ಮುಂದುವರಿಕೆಗಾಗಿ ಶೇಕಡಾ 40ರಷ್ಟು ಹಣ ಮೀಸಲಿಡಲಿದ್ದು, ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಸಂದೇಶ ರವಾನೆ ಮಾಡಿ ಲೋಕಸಭಾ ವೋಟ್ ಬ್ಯಾಂಕ್ ಗ್ಯಾರಂಟಿ ಮಾಡಿಕೊಳ್ಳಲು ಮುಂದಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಾರಿ ಬಜೆಟ್‌ನಲ್ಲೂ ಅಹಿಂದಗೆ ಬಂಪರ್ ದೊರೆಯಲಿದ್ದು, ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಲ್ಲಿ ಇರುವ ಎಲ್ಲ ಯೋಜನೆಗಳ ಮುಂದುವರಿಕೆ ಮಾಡಬಹುದು.

ಐದು ಗ್ಯಾರಂಟಿಗಳಿಗೆ ಸುಮಾರು 54 ಸಾವಿರ ಕೋಟಿ ರೂಪಾಯಿ ಮೀಸಲು ಇಡಲಿರುವ ಸಿಎಂ ರೈತರಿಗೆ ಬಡ್ಡಿ ರಹಿತ ಸಾಲ ಹಣ ಏರಿಕೆ, ಮಹಿಳಾ ಸ್ವಸಹಾಯ ಸಂಘಗಳಿಗೆ ಹಣಕಾಸು ಮೀಸಲು, ಶೂನ್ಯ ಬಡ್ಡಿದರದಲ್ಲಿ ಸಾಲ, ವೃದ್ಧಾಪ್ಯ ವೇತನ ಏರಿಕೆ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ವಿಶೇಷ ಅನುದಾನ, ಗೋಕಾಕ್ ಇಲ್ಲವೇ ಅಥಣಿಯನ್ನು ನೂತನ ಜಿಲ್ಲಾ ಕೇಂದ್ರವಾಗಿಸಲು ಹಣ ಮೀಸಲು, ಅಂಬೇಡ್ಕರ್ ನಿಗಮ, ವಾಲ್ಮೀಕಿ ನಿಗಮ, ತಾಂಡ ಅಭಿವೃದ್ಧಿ ನಿಗಮಗಳಿಗೆ ಮೀಸಲಿಟ್ಟ ಹಣ ಏರಿಕೆ ಮಾಡುತ್ತಾರೆ ಎಂದು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.