ಈ ಬಾರಿಯೂ ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಟ್ಟ ಸರ್ಕಾರ; ಯುವನಿಧಿಗಿಲ್ಲ ಅನುದಾನ...!
ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಹೇಳಿದ ಮುಖ್ಯಮಂತ್ರಿಗಳು, ಈ ಬಜೆಟ್‌ನಲ್ಲಿ ವಿಶೇಷವಾಗಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಟ್ಟಿರುವುದಾಗಿ ತಿಳಿಸಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿಯೂ ಗ್ಯಾರಂಟಿ ಯೋಜನೆಗಳಿಗೆ ಅನುದಾನವನ್ನು ಮೀಸಲಿಟ್ಟಿದ್ದಾರೆ.
ರಾಜ್ಯ ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಅಭಿವೃದ್ಧಿ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಹೇಳಿದ ಮುಖ್ಯಮಂತ್ರಿಗಳು, ಈ ಬಜೆಟ್‌ನಲ್ಲಿ ವಿಶೇಷವಾಗಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ., ಅನ್ನ ಭಾಗ್ಯ ಯೋಜನೆಗೆ 6,200 ಕೋಟಿ ರೂ. ಗೃಹ ಜ್ಯೋತಿ ಯೋಜನೆಗೆ ಈ ವರ್ಷ 10,578 ಕೋಟಿ ರೂ. ಹಾಗೂ ಶಕ್ತಿ ಯೋಜನೆಗೆ 5,300 ಕೋಟಿ ಹಣ ಮೀಸಲಿಟ್ಟಿರುವುದಾಗಿ ತಿಳಿಸಿದರು. ಆದರೆ, ಯುವ ನಿಧಿಗೆ ಯಾವುದೇ ಅನುದಾನವನ್ನು ಘೋಷಣೆ ಮಾಡಿಲ್ಲ.

ಕರ್ನಾಟಕ ಬಜೆಟ್ 2026: 'ಗೃಹಲಕ್ಷ್ಮಿ'ಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ; 28 ಸಾವಿರ ಕೋಟಿ ರೂ ಹಂಚಿಕೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


