ಕರ್ನಾಟಕ ಬಜೆಟ್ 2026: ಬೆಂಗಳೂರಿನಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ ಗುರಿ
ಸಿಎಂ ಸಿದ್ದರಾಮಯ್ಯ ಆರೋಗ್ಯ ಕ್ಷೇತ್ರದಲ್ಲೂ ಹಲವು ಘೋಷಣೆಗಳನ್ನು ಮಾಡಿದ್ದು, ಬೆಂಗಳೂರಿನಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

ಬೆಂಗಳೂರು: 2026ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಆರೋಗ್ಯ ಕ್ಷೇತ್ರಕ್ಕೆ ಹಲವು ಘೋಷಣೆಗಳನ್ನು ಮಾಡಿದ್ದು, ಪ್ರಮುಖವಾಗಿ 'ಬೆಂಗಳೂರಿನಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ' ಸ್ಥಾಪಿಸುವ ಭರವಸೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಆರೋಗ್ಯ ಕ್ಷೇತ್ರದಲ್ಲೂ ಹಲವು ಘೋಷಣೆಗಳನ್ನು ಮಾಡಿದ್ದು, ಬೆಂಗಳೂರಿನಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ಇದೇ ವೇಳೆ ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ ಮತ್ತು ಕೆಜಿಎಫ್ ಪ್ರದೇಶಗಳಲ್ಲಿನ ESI ಆಸ್ಪತ್ರೆಗಳನ್ನು ಉನ್ನತೀಕರಿಸಲಾಗುತ್ತದೆ. ಇದಕ್ಕಾಗಿ ಬಜೆಟ್ ನಲ್ಲಿ ನಿಧಿ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅಂತೆಯೇ ವಿಜಯಪುರದಲ್ಲಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲ ಗೃಹ ನಿರ್ಮಾಣ ಘಟಕ ಸ್ಥಾಪಿಸುವ ಯೋಜನೆಯನ್ನೂ ಘೋಷಿಸಲಾಗಿದೆ ಎಂದು ತಿಳಿಸಿದರು.
ಆರ್ಥಿಕ ಅಭಿವೃದ್ಧಿಯಲ್ಲಿ ದೇಶದಲ್ಲೇ ರಾಜ್ಯ ಮುಂಚೂಣಿಯಲ್ಲಿ
ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾತನಾಡಿದ ಸಿಎಂ, ಕರ್ನಾಟಕ ಆರ್ಥಿಕ ಅಭಿವೃದ್ಧಿಯಲ್ಲಿ ದೇಶದ ಮಟ್ಟದಲ್ಲಿ ಮುಂಚೂಣಿಯಲ್ಲಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.
ಜೊತೆಗೆ ಒಕ್ಕೂಟ ಸರ್ಕಾರವು ರಾಜ್ಯಗಳತ್ತ ಇನ್ನಷ್ಟು ಸಂವೇದನಾಶೀಲವಾಗಿ ವರ್ತಿಸಬೇಕು ಎಂದು ಅಭಿಪ್ರಾಯಪಟ್ಟರು. ಒಟ್ಟಾರೆ, 2026-27ರ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳು, ಆರೋಗ್ಯ, ಮೂಲಸೌಕರ್ಯ ಹಾಗೂ ಕೃಷಿ ಕ್ಷೇತ್ರಗಳಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿರುವುದು ಗಮನಾರ್ಹವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



