'ಮೋದಿ ಸಾಲ ಮಾಡಿಲ್ವಾ?' ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ; ಬಿಜೆಪಿಯವರಿಗೆ ದೇಶ, ರಾಜ್ಯ ಹೇಗೆ ನಡೆಸಬೇಕೆಂಬುದು ಗೊತ್ತಿಲ್ಲ! Video
ಕೇಂದ್ರ ಸರ್ಕಾರ ನಮ್ಮ 80 ಸಾವಿರ ಕೋಟಿ ರೂ. ಪಾಲನ್ನ ನೀಡಿಲ್ಲ. ಅದರಿಂದಾಗಿ ಸಾಲವಾಗಿದೆ. ಎಎಒ ಯೋಜನೆಯ ಕೇಂದ್ರದ ಪಾಲಾದ 15 ಸಾವಿರ ಕೋಟಿ ರೂ. ನಾವು ಕೊಟ್ಟಿದ್ದೇವೆ

ಬೀದರ್: ಕೇಂದ್ರದ ಅನ್ಯಾಯದಿಂದ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ ಎಂದು ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
ಬೀದರ್‌ನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದ ಅವರು ಬಜೆಟ್ ವಿಚಾರವಾಗಿ ಸಾಲರಾಮಯ್ಯ ಎಂದು ವ್ಯಂಗ್ಯ ಮಾಡಿದ್ದ ಬಿಜೆಪಿ ವಿರುದ್ಧ ಹರಿಹಾಯ್ದರು. ಅವರಿಗೆ ದೇಶ ಮತ್ತು ರಾಜ್ಯವನ್ನ ಆರ್ಥಿಕವಾಗಿ ಹೇಗೆ ನಡೆಸಬೇಕು ಎಂದು ಗೊತ್ತಿಲ್ಲ. ಕೇಂದ್ರ ಸರ್ಕಾರದ ಅನ್ಯಾಯದಿಂದಾಗಿ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ ಎಂದು ಅಸಮಾಧಾನ ಹೊರಹಾಕಿದರು.
ಕೇಂದ್ರ ಸರ್ಕಾರ ನಮ್ಮ 80 ಸಾವಿರ ಕೋಟಿ ರೂ. ಪಾಲನ್ನ ನೀಡಿಲ್ಲ. ಅದರಿಂದಾಗಿ ಸಾಲವಾಗಿದೆ. ಎಎಒ ಯೋಜನೆಯ ಕೇಂದ್ರದ ಪಾಲಾದ 15 ಸಾವಿರ ಕೋಟಿ ರೂ. ನಾವು ಕೊಟ್ಟಿದ್ದೇವೆ. ಪಂಚಾಯಿತಿಗೆ ಕೊಡಬೇಕಾದ 15ನೇ ಹಣಕಾಸಿನ ಪಾಲನ್ನು ಕೂಡಾ ಕೇಂದ್ರ ನೀಡಿಲ್ಲ. ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳಿಗೆ ನಾವು ಅನುದಾನ ಕೊಡ್ತಿದ್ದೇವೆ.
ನಾವು ಸಾಲ ಮಾಡಿದ್ದನ್ನ ಮಾತ್ರ ಹೇಳ್ತಾರೆ. ಮೋದಿಯವರು 200 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಅವರು ಕೂಡಾ ಸಾಲ ಮಾಡೇ ದೇಶ ನಡೆಸುತ್ತಿದ್ದಾರೆ. ಅದನ್ನು ನಡೆಸಲಿಕ್ಕೆ ಅವರೊಬ್ಬರೇ ಬೇಕಾ? ಬಿಜೆಪಿಯವರ ರೀತಿ ಚಿಕ್ಕಮಕ್ಕಳು ಕೂಡಾ ಮಾತನಾಡಲ್ಲ, ಅವರನ್ನ ದೇವರೇ ಕಾಪಾಡಬೇಕು ಎಂದು ವ್ಯಂಗ್ಯವಾಡಿದ್ದಾರೆ.
ಕುಮಾರಸ್ವಾಮಿಯವರು ದಿನಾ ಬೆಳಗಾದರೆ ಅಮಿತ್ ಶಾ ಪಕ್ಕಾನೇ ಕೂತ್ಕೋತಾರೆ. ಫೋನ್ ಟ್ಯಾಪಿಂಗ್ ಆಗಿದ್ರೆ ತನಿಖೆ ಮಾಡಲಿಕ್ಕೆ ಒತ್ತಾಯ ಮಾಡಲಿ, ಸಾಕ್ಷಿಗಳನ್ನ ಕೊಡಲಿ. ಅದುಬಿಟ್ಟು ಯಾವಾಗಲೂ ಹಿಟ್ ಅಂಡ್ ರನ್ ರೀತಿ ಮಾಡುವುದು ಕುಮಾರಸ್ವಾಮಿಯವರಿಗೆ ಘನತೆ ತರುವುದಿಲ್ಲ ಎಂದು ತಿರುಗೇಟು ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



