ರಾಜ್ಯ

ಬಿಡಿಎ ಅರಣ್ಯ ಅಧಿಕಾರಿ ಮನೆಯಲ್ಲಿ 3.08 ಕೋಟಿ ಅಕ್ರಮ ಆಸ್ತಿ ಪತ್ತೆ: ಲೋಕಾಯುಕ್ತ ಪೊಲೀಸರು

ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಹಿನ್ನಲೆಯಲ್ಲಿ ಬಿಡಿಎ ಅರಣ್ಯ ಅಧಿಕಾರಿಗೆ ಸೇರಿದ ನಾಲ್ಕು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ ಸುಮಾರು 3.08 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ.

ಬಿಡಿಎ ಅರಣ್ಯ ಅಧಿಕಾರಿ ಮನೆಯಲ್ಲಿ 3.08 ಕೋಟಿ ಅಕ್ರಮ ಆಸ್ತಿ ಪತ್ತೆ: ಲೋಕಾಯುಕ್ತ ಪೊಲೀಸರು
ಲೋಕಾಯುಕ್ತ
Published On :

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಹಿನ್ನಲೆಯಲ್ಲಿ ಬಿಡಿಎ ಅರಣ್ಯ ಅಧಿಕಾರಿಗೆ ಸೇರಿದ ನಾಲ್ಕು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ ಸುಮಾರು 3.08 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (BDA) ಕಾರ್ಯನಿರ್ವಹಿಸುತ್ತಿರುವ ರೇಂಜ್ ಫಾರೆಸ್ಟ್ ಆಫೀಸರ್ ದಲೇಶ್ ​​ಎ ಎಲ್ ಅವರ ಸಂಬಂಧಿಕರ ಮನೆಗಳು, ಕಚೇರಿ ಮತ್ತು ಆವರಣದಲ್ಲಿ ಶೋಧ ನಡೆಸಲಾಗಿತ್ತು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಅಕ್ರಮ ಆಸ್ತಿ ಕುರಿತಂತೆ ದಲೇಶ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೀಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶೋಧದ ಸಮಯದಲ್ಲಿ, ಮೂರು ನಿವೇಶನಗಳು, ಎರಡು ಮನೆಗಳು, ಒಂದು ವಾಣಿಜ್ಯ ಕಟ್ಟಡ ಮತ್ತು ಕೃಷಿ ಭೂಮಿ ಸೇರಿದಂತೆ ಸುಮಾರು 2.70 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಾಳಿ ವೇಳೆ 48 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಚರ ಆಸ್ತಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಇವುಗಳಲ್ಲಿ 1.35 ಲಕ್ಷ ರೂ. ನಗದು, 13 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳು ಮತ್ತು ಸುಮಾರು 34 ಲಕ್ಷ ರೂ. ಮೌಲ್ಯದ ವಾಹನಗಳು ಸೇರಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ದಾಳಿಯ ಸಮಯದಲ್ಲಿ ಒಟ್ಟಾರೆಯಾಗಿ 3.08 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.