ಬೆಂಗಳೂರು: ಅಕ್ರಮ ಸಂಬಂಧ; ವಿವಾಹಿತ ಮಹಿಳೆಗೆ ಹಾಗೂ ಪೋಷಕರಿಗೆ ಬೆಂಕಿ ಹಚ್ಚಿದ ವಿವಾಹಿತ; ಮೂವರ ಸ್ಥಿತಿ ಗಂಭೀರ!
ತರಬನಹಳ್ಳಿಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕ್ಷುಲಕ ಕಾರಣಕ್ಕೆ ಯುವಕನೋರ್ವ ಪೆಟ್ರೋಲ್ ಸುರಿದು ತನ್ನ ಪ್ರಿಯತಮೆ ಮತ್ತು ಆಕೆಯ ಪೋಷಕರ ಮೇಲೆ ಬೆಂಕಿ ಹಚ್ಚಿದ್ದಾನೆ. ಆರೋಪಿಯನ್ನು ಪಾಂಡು ಅಲಿಯಾಸ್ ಚಂದು ಎಂದು ಗುರುತಿಸಲಾಗಿದ್ದು ಆತನನ್ನು ಬಂಧಿಸಲಾಗಿದೆ.

ಬೆಂಗಳೂರು: ತರಬನಹಳ್ಳಿಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕ್ಷುಲಕ ಕಾರಣಕ್ಕೆ ಯುವಕನೋರ್ವ ಪೆಟ್ರೋಲ್ ಸುರಿದು ತನ್ನ ಪ್ರಿಯತಮೆ ಮತ್ತು ಆಕೆಯ ಪೋಷಕರ ಮೇಲೆ ಬೆಂಕಿ ಹಚ್ಚಿದ್ದಾನೆ. ಆರೋಪಿಯನ್ನು ಪಾಂಡು ಅಲಿಯಾಸ್ ಚಂದು ಎಂದು ಗುರುತಿಸಲಾಗಿದ್ದು ಆತನನ್ನು ಬಂಧಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮೂವರು ಪ್ರಸ್ತುತ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಪಿ ಚಂದು ಮತ್ತು ಸುಮಲತಾ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಅವರ ಸ್ನೇಹ ಕ್ರಮೇಣ ಸಂಬಂಧವಾಗಿ ಬೆಳೆಯಿತು. ಸುಮಾರು ಆರು ವರ್ಷಗಳಿಂದ ಪ್ರೀತಿಯಲ್ಲಿದ್ದರೆಂದು ವರದಿಯಾಗಿದೆ. ಆದರೆ ಇಬ್ಬರಿಗೂ ಈ ಮೊದಲೇ ಬೇರೆಯವರ ಜೊತೆ ಮದುವೆಯಾಗಿತ್ತು. ಸುಮಲತಾಗೆ ಇಬ್ಬರು ಗಂಡು ಮಕ್ಕಳಿದ್ದರೆ ಆರೋಪಿ ಪಾಂಡು ಕೂಡ ಸುಮಾರು ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು ಮಕ್ಕಳಿದ್ದಾರೆ. ಸುಮಲತಾಗೆ ಮದುವೆಯಾಗಿ ಮಕ್ಕಳಿದ್ದಾರೆ ಎಂಬ ವಿಷಯ ಮೊದಲೇ ಆರೋಪಿಗೆ ತಿಳಿದಿತ್ತು. ಇಬ್ಬರೂ ಮದುವೆಯಾದ ನಂತರವೂ ಸಂಬಂಧ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿವಾಹಿತರಾಗಿದ್ದರೂ ಇಬ್ಬರೂ ಆಗಾಗ್ಗೆ ಭೇಟಿಯಾಗುತ್ತಿದ್ದರು. ಈ ಅವಧಿಯಲ್ಲಿ ಆರೋಪಿಯು ಮತ್ತೊಂದು ಅಕ್ರಮ ಸಂಬಂಧವನ್ನು ಸಹ ಬೆಳೆಸಿಕೊಂಡಿದ್ದನು. ತನ್ನ ಮನೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ಸಹ ಇರಿಸಿಕೊಂಡಿದ್ದನು ಎಂದು ಆರೋಪಿಸಲಾಗಿದೆ. ಈ ಸಂಬಂಧದ ಬಗ್ಗೆ ಸುಮಲತಾ, ಚಂದುವನ್ನು ಪ್ರಶ್ನಿಸಿದ್ದರಿಂದ ಇಬ್ಬರ ನಡುವೆ ಉದ್ವಿಗ್ನತೆ ಹೆಚ್ಚಾಯಿತು ಎಂದು ವರದಿಯಾಗಿದೆ. ಬೈಕ್‌ಗೆ ಸಂಬಂಧಿಸಿದ ವಿವಾದವೇ ಘಟನೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಬೈಕ್ ಕೇಳಲು ಸುಮಲತಾ ಮನೆಗೆ ಬಂದಿದ್ದಾನೆ. ಆದರೆ, ಸುಮಲತಾ ಮತ್ತು ಅವರ ಕುಟುಂಬ ಸದಸ್ಯರು ಬೈಕ್ ನೀಡಲು ನಿರಾಕರಿಸಿದರು. ನಂತರ ಗಲಾಟೆ ನಡೆಯಿತು.
ಇದರಿಂದ ಕೋಪಗೊಂಡ ಚಂದು, ಸುಮಲತಾಳ ತಾಯಿ ಮಂಜಮ್ಮನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ನಂತರ ತಂದೆ ಶ್ರೀರಾಮ್ ಅವರ ಮೇಲೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಮೂವರಿಗೂ ತೀವ್ರ ಸುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ಸುಮಲತಾ ಅವರ ತಾಯಿ ಮಂಜಮ್ಮರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



