ನೀರಿನ ಸಮಸ್ಯೆ ಬಗ್ಗೆ ಮಕ್ಕಳ ಪತ್ರ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಈ ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿಯ ಬಜೆಟ್ ನಲ್ಲಿ ಆ ಸಮಸ್ಯೆ ಪರಿಹಾರಕ್ಕಾಗಿ 490 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ.

ಬೆಂಗಳೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ ಸಮಸ್ಯೆ ಕುರಿತು ಕೆಲವು ಸಮಯದ ಹಿಂದೆ ಮಕ್ಕಳು ಪತ್ರ ಬರೆದು, ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡುವಂತೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು.
ಈ ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿಯ ಬಜೆಟ್ ನಲ್ಲಿ ಆ ಸಮಸ್ಯೆ ಪರಿಹಾರಕ್ಕಾಗಿ 490 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಮಕ್ಕಳ ಕೋರಿಕೆಯ ಮೇರೆಗೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದಾಗ ಆ ಹಳ್ಳಿಗೆ ಸಮರ್ಪಕ ನೀರಾವರಿ ಯೋಜನೆಯೊಂದರ ಅಗತ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಈ ಸಾಲಿನ ಬಜೆಟ್ ನಲ್ಲಿ "ಉಡುತೊರೆಹಳ್ಳ ನೀರಾವರಿ ಯೋಜನೆ"ಯನ್ನು ಘೋಷಿಸಿ, ರೂ.490 ಕೋಟಿ ಅನುದಾನವನ್ನು ಸಹ ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ.
ಅಹವಾಲು ಸಲ್ಲಿಸಿದ ಮಕ್ಕಳ ಧ್ವನಿ ಎಳೆಯದಾದರೂ, ಅದನ್ನು ಕಡೆಗಣಿಸದೆ ಮುಕ್ತವಾಗಿ ಆಲಿಸಿ, ಸಕಾರಾತ್ಮಕವಾಗಿ ಸ್ಪಂದಿಸುವ ತಾಯಿಯ ಹೃದಯ ನಮ್ಮ ಸರ್ಕಾರದ್ದು. ಪುಟಾಣಿ ಮಕ್ಕಳ ಧನ್ಯವಾದವನ್ನು ಅತ್ಯಂತ ಪ್ರೀತಿಯಿಂದ ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ, ನನ್ನ ಮತ್ತು ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟು ತಮ್ಮ ಕಷ್ಟವನ್ನು ನಮ್ಮ ಗಮನಕ್ಕೆ ತಂದು, ಇಂದು ಸಾವಿರಾರು ಕುಟುಂಬಗಳ ಭವಿಷ್ಯ ಬದಲಾಗಲು ಕಾರಣರಾದ ಪುಟಾಣಿಗಳನ್ನು ಮುಖ್ಯಮಂತ್ರಿ ಶ್ಲಾಘಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



