ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: 369 ವಾರ್ಡ್‌ಗಳ ಅಂತಿಮ ಮೀಸಲಾತಿ ಪ್ರಕಟ
ಅಂತಿಮ ಮೀಸಲಾತಿ ಪಟ್ಟಿಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ.

ಬೆಂಗಳೂರು: ನಗರದ ಐದು ನಗರ ಪಾಲಿಕೆಗಳನ್ನು ಒಳಗೊಂಡಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 369 ವಾರ್ಡ್‌ಗಳಿಗೆ ವಾರ್ಡ್‌ವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಶನಿವಾರ ರಾತ್ರಿ ಪ್ರಕಟಿಸಿದೆ.
ಅಂತಿಮ ಮೀಸಲಾತಿ ಪಟ್ಟಿಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ. ಈ ಹಿಂದೆ ಬಿಡುಗಡೆ ಮಾಡಲಾಗಿದ್ದ ಕರಡು ಪಟ್ಟಿಗೆ ಸಲ್ಲಿಕೆಯಾಗಿದ್ದ ನೂರಾರು ಆಕ್ಷೇಪಣೆಗಳನ್ನು ಪರಿಶೀಲಿಸಿದ ಅಧಿಕಾರಿಗಳು, ಅಗತ್ಯ ತಿದ್ದುಪಡಿಗಳೊಂದಿಗೆ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ.
ಒಟ್ಟು 369 ವಾರ್ಡ್‌ಗಳ ಪೈಕಿ 176 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಕರಡು ಪಟ್ಟಿಯಲ್ಲಿ ಕಂಡುಬಂದಿದ್ದ ಅಸಮತೋಲನವನ್ನು ಸರಿಪಡಿಸಿ, ಸಮರ್ಪಕವಾಗಿ ಮೀಸಲಾತಿ ಹಂಚಿಕೆ ಮಾಡಲಾಗಿದೆ.
ಈ ಕ್ರಮದಿಂದ ಬಹುಕಾಲದಿಂದ ಮುಂದೂಡಿಕೆಯಾಗಿದ್ದ ಪಾಲಿಕೆ ಚುನಾವಣೆಗೆ ಮತ್ತೊಂದು ಹೆಜ್ಜೆ ಮುಂದಿಟ್ಟಿಂತಾಗಿದೆ.
ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮುಂದೆ ಜೂನ್ 30ರೊಳಗೆ ಮಹಾನಗರ ಪಾಲಿಕೆ ಚುನಾವಣೆಗಳನ್ನು ನಡೆಸುವುದಾಗಿ ಭರವಸೆ ನೀಡಿತ್ತು.
ಅಂತಿಮ ಪಟ್ಟಿಯ ಪ್ರಕಾರ 198 ವಾರ್ಡ್‌ಗಳನ್ನು ಸಾಮಾನ್ಯ ವರ್ಗಕ್ಕೆ, 43 ವಾರ್ಡ್‌ಗಳನ್ನು ಪರಿಶಿಷ್ಟ ಜಾತಿಗೆ, ಏಳು ವಾರ್ಡ್‌ಗಳನ್ನು ಪರಿಶಿಷ್ಟ ಪಂಗಡಕ್ಕೆ, 97 ಹಿಂದುಳಿದ ವರ್ಗ ಎ ಗೆ ಮತ್ತು 24 ವಾರ್ಡ್‌ಗಳನ್ನು ಹಿಂದುಳಿದ ವರ್ಗ ಬಿ ಗೆ ಮೀಸಲಿಡಲಾಗಿದೆ.
2011ರ ಜನಗಣತಿ ಆಧರಿಸಿ ಜನವರಿ 8 ರಂದು ವಾರ್ಡ್‌ವಾರು ಕರಡು ಮೀಸಲು ಪಟ್ಟಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಜನವರಿ 23 ರವರೆಗೆ ಕಾಲಾವಕಾಶ ನೀಡಲಾಗಿತ್ತು. ಬಳಿಕ ಆಕ್ಷೇಪಣೆಗಳನ್ನು ಪರಿಶೀಲಿಸಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು.
Greater Bengaluru Governance Act, 2024 ಪ್ರಕಾರ ಸಮಿತಿ ಆಕ್ಷೇಪಣೆಗಳನ್ನು ಪರಿಶೀಲಿಸಿ, ಕೆಲ ಸೂಚನೆಗಳನ್ನು ಸಮರ್ಥನೆ ಕಂಡು ಅಗತ್ಯ ಬದಲಾವಣೆಗಳನ್ನು ಮಾಡಿದೆ. ನಂತರ ಸಮಿತಿ ಶಿಫಾರಸು ಮಾಡಿದ ಅಂತಿಮ ಪಟ್ಟಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



