ರಾಜ್ಯ

ಬೆಂಗಳೂರು Hit-and-run ಕೇಸ್: ಬೈಕ್'ಗೆ ಗುದ್ದಿ ಎಳೆದೊಯ್ದ ಕಾರು; ಪೆಟ್ರೋಲ್ ಸೋರಿಕೆಯಾಗಿ ಭಾರೀ ಬೆಂಕಿ..! Video

ಡಿಕ್ಕಿಯ ಪರಿಣಾಮ ಬೈಕ್ ಕಾರಿನ ಕೆಳಗೆ ಸಿಲುಕಿಕೊಂಡಿದ್ದು, ಕಾರು ಚಾಲಕ ಕೆಲ ದೂರದವರೆಗೂ ಬೈಕ್'ನ್ನು ಎಳೆದುಕೊಂಡು ಹೋಗಿದ್ದಾನೆ.

ಬೆಂಗಳೂರು Hit-and-run ಕೇಸ್: ಬೈಕ್'ಗೆ ಗುದ್ದಿ ಎಳೆದೊಯ್ದ ಕಾರು; ಪೆಟ್ರೋಲ್ ಸೋರಿಕೆಯಾಗಿ ಭಾರೀ ಬೆಂಕಿ..! Video
ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದು.
Published On :

ಬೆಂಗಳೂರು: ನಗರದ ಜಯಮಹಲ್ 1ನೇ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಹಾಗೂ ಬೈಕ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಭಾನುವಾರ ನಡೆದಿದೆ.

ಮಾಹಿತಿಯ ಪ್ರಕಾರ, ವೇಗವಾಗಿ ಬಂದ ಇನೋವಾ ಕಾರು ಬೈಕ್‌ಗೆ ಡಿಕ್ಕಿ ಹೊಡೆದು ಅದನ್ನು ಕೆಲವು ದೂರ ರಸ್ತೆ ಮೇಲೆ ಎಳೆದೊಯ್ದಿದೆ.

ಡಿಕ್ಕಿಯ ಪರಿಣಾಮ ಬೈಕ್ ಕಾರಿನ ಕೆಳಗೆ ಸಿಲುಕಿಕೊಂಡಿದ್ದು, ಕಾರು ಚಾಲಕ ಕೆಲ ದೂರದವರೆಗೂ ಬೈಕ್'ನ್ನು ಎಳೆದುಕೊಂಡು ಹೋಗಿದ್ದಾನೆ.

ಈ ವೇಳೆ ಬೈಕ್‌ನಿಂದ ಪೆಟ್ರೋಲ್ ಸೋರಿಕೆಯಾಗಿದ್ದು, ರಸ್ತೆ ಮೇಲೆ ಎಳೆಯುವ ವೇಳೆ ಉಂಟಾದ ಘರ್ಷಣೆ ಹಾಗೂ ಹಾನಿಯಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಕಾರಿಗೂ ತಗುಲಿದೆ. ಸ್ಥಳದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳದಲ್ಲಿ ಕೆಲದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿದೆ.

ಅಪಘಾತದ ವೇಳೆ ಬೈಕ್ ನಲ್ಲಿದ್ದ ಮಹಿಳೆಯೊಬ್ಬರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗುತ್ತಿದ್ದು, ಮಹಿಳೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಅಪಘಾತ ಸಂಭವಿಸಿದ ಕೂಡಲೇ ಇನ್ನೋವಾ ಚಾಲಕ ಮತ್ತು ಕಾರಿನಲ್ಲಿದ್ದ ಇತರರು ಸ್ಥಳದಿಂದ ಪರಾರಿಯಾಗಿದ್ದಾರೆ. ಪರಾರಿಯಾದ ಚಾಲಕನ ಪತ್ತೆಗಾಗಿ ಪೊಲೀಸರ ತೀವ್ರ ಶೋಧ ಮುಂದುವರಿದಿದೆ.

ಅಪಘಾತ ಸಂಭವಿಸಿದ ವೇಳೆ ಬೈಕ್ ಚಲಾಯಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.