ರಾಜ್ಯ

ಕಾಲೇಜು ಕ್ಯಾಂಪಸ್‌ನಲ್ಲಿ ಇಂಗ್ಲಿಷ್ ಮಾತನಾಡಿ: ವಿದ್ಯಾರ್ಥಿಗಳಿಗೆ ಸಚಿವ ಸುಧಾಕರ್ ಕರೆ, ವಿವಾದ

ಕನ್ನಡ ನಮ್ಮ ಮಾತೃಭಾಷೆ ನಿಜ. ಆದರೆ, ಇಂದು ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಮುನ್ನುಗ್ಗಬೇಕು ಎಂದರೆ ಅವರಿಗೆ ಆಂಗ್ಲ ಭಾಷೆಯ ಮೇಲೆ ಹಿಡಿತ ಸಾಧಿಸುವುದು ಅತ್ಯಗತ್ಯ.

ಕಾಲೇಜು ಕ್ಯಾಂಪಸ್‌ನಲ್ಲಿ ಇಂಗ್ಲಿಷ್ ಮಾತನಾಡಿ: ವಿದ್ಯಾರ್ಥಿಗಳಿಗೆ ಸಚಿವ ಸುಧಾಕರ್ ಕರೆ, ವಿವಾದ
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್
Published On :

ಧಾರವಾಡ: ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಇಂಗ್ಲಿಷ್‌ನಲ್ಲಿ ಮಾತನಾಡುವಂತೆ ಪ್ರೋತ್ಸಾಹಿಸಬೇಕು ಎಂಬ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಧಾರವಾಡದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭವಿಷ್ಯದ ಸ್ಪರ್ಧೆಯನ್ನು ಎದುರಿಸಲು ಭಾಷಾ ಕೌಶಲ್ಯ ಬಹಳ ಮುಖ್ಯ. ಆದ್ದರಿಂದ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಇಂಗ್ಲಿಷ್ ಮಾತನಾಡುವಂತೆ ಪ್ರಾಂಶುಪಾಲರು ಉತ್ತೇಜಿಸಬೇಕು ಎಂದು ಸೂಚಿಸಿದರು.

ಕನ್ನಡ ನಮ್ಮ ಮಾತೃಭಾಷೆ ನಿಜ. ಆದರೆ, ಇಂದು ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಮುನ್ನುಗ್ಗಬೇಕು ಎಂದರೆ ಅವರಿಗೆ ಆಂಗ್ಲ ಭಾಷೆಯ ಮೇಲೆ ಹಿಡಿತ ಸಾಧಿಸುವುದು ಅತ್ಯಗತ್ಯ. ತರಬೇತಿ ಪಡೆದ ಪ್ರತಿಯೊಬ್ಬ ಪ್ರಾಂಶುಪಾಲರು ತಮ್ಮ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಆಂಗ್ಲ ಭಾಷೆಯಲ್ಲಿಯೇ ಸಂವಹನ ಮಾಡಬೇಕು. ಆ ರೀತಿ ಅವರನ್ನು ಪ್ರೇರೇಪಿಸಬೇಕು ಎಂದು ಹೇಳಿದರು.

ಸಚಿವರ ಈ ಹೇಳಿಕೆಗೆ ಕನ್ನಡ ಪರ ಸಂಘಟನೆಗಳ ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆಯ ಮೂಲಕ ಕನ್ನಡ ಭಾಷೆಯ ಮಹತ್ವವನ್ನು ಕಡಿಮೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕನ್ನಡದಲ್ಲೇ ಮಾತನಾಡುವ ವಿದ್ಯಾರ್ಥಿಗಳು ಕೂಡ ಸ್ಪರ್ಧೆಯನ್ನು ಎದುರಿಸಬಹುದು. ಇಂಗ್ಲಿಷ್ ಅನ್ನು ಪ್ರತ್ಯೇಕವಾಗಿ ಉತ್ತೇಜಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆದರೆ, ಕಾಂಗ್ರೆಸ್ ಪಕ್ಷದ ಕೆಲ ನಾಯಕರು ಸಚಿವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸಚಿವರು ತಾಯಿಭಾಷೆಯನ್ನು ನಿರ್ಲಕ್ಷ್ಯ ಮಾಡುವಂತೆ ಹೇಳಿಲ್ಲ. ಇಲ್ಲಿ ಅನೇಕರು ಇಂಗ್ಲಿಷ್ ತಿಳಿದಿದ್ದರೂ ಮಾತನಾಡಲು ಹಿಂಜರಿಯುತ್ತಾರೆ. ಕ್ಯಾಂಪಸ್‌ನಲ್ಲಿ ಕೆಲ ಗಂಟೆಗಳಾದರೂ ಇಂಗ್ಲಿಷ್ ಮಾತನಾಡುವಂತೆ ಪ್ರೋತ್ಸಾಹಿಸಿದರೆ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.