RSS ಅನ್ನು ಯಾರೂ ಬ್ಯಾನ್ ಮಾಡಿಲ್ಲ, ಮಾಡೋದಕ್ಕೂ ಆಗಲ್ಲ: ಸತೀಶ್ ಜಾರಕಿಹೊಳಿ
ನಮ್ಮ ಸರ್ಕಾರವಾಗಲೀ ಅಥವಾ ಯಾವುದೇ ಸರ್ಕಾರವಾಗಲೀ ಆರ್ಎಸ್ಎಸ್ ನ್ನು ನಿಷೇಧಿಸುವ ಬಗ್ಗೆ ಎಲ್ಲೂ ಹೇಳಿಲ್ಲ. ಅದರ ಬಗ್ಗೆ ಚರ್ಚೆ ಮಾಡುವುದು ಅನಗತ್ಯ ಎಂದರು.

ಬೆಂಗಳೂರು: RSS ನ್ನು ನಿಷೇಧಿಸುತ್ತೇವೆ ಎಂದು ಯಾರಾದರೂ ಅಂದುಕೊಂಡಿದ್ದರೆ ಅದು ಭ್ರಮೆ ಎಂಬ ಮಾಜಿ ಸಂಸದ ಅನಂತ ಕುಮಾರ್ ಹೆಗಡೆಯವರ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದಾಗ ಆರ್ ಎಸ್ ಎಸ್ ನ್ನು ಇದುವರೆಗೆ ಯಾರೂ ನಿಷೇಧ ಮಾಡಿಲ್ಲ, ನಿಷೇಧ ಮಾಡುವುದಾಗಿ ಯಾರೂ ಹೇಳಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಬಗ್ಗೆ ಪ್ರಸ್ತಾಪಿಸಿದ್ದನ್ನು ಉಲ್ಲೇಖಿಸಿದ ಅವರು, ಸಂಘಟನೆ ನಿಷೇಧಕ್ಕೂ ಅದರ ಚಟುವಟಿಕೆ ನಿರ್ಬಂಧಕ್ಕೂ ವ್ಯತ್ಯಾಸವಿದೆಯಲ್ಲವೇ ಎಂದರು.
ನಮ್ಮ ಸರ್ಕಾರವಾಗಲೀ ಅಥವಾ ಯಾವುದೇ ಸರ್ಕಾರವಾಗಲೀ ಆರ್ಎಸ್ಎಸ್ ನ್ನು ನಿಷೇಧಿಸುವ ಬಗ್ಗೆ ಎಲ್ಲೂ ಹೇಳಿಲ್ಲ. ಅದರ ಬಗ್ಗೆ ಚರ್ಚೆ ಮಾಡುವುದು ಅನಗತ್ಯ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



