ಬಳ್ಳಾರಿ ವಸತಿ ಶಾಲೆಯಲ್ಲಿ ಮನಸೋ ಇಚ್ಛೆ ಹಲ್ಲೆ: ಓರ್ವನ ಸಾವಿಗೆ ಕಾರಣನಾಗಿದ್ದ ಬಾಲಕ ಕೊನೆಗೂ ಬಂಧನ
ಮಾರ್ಚ್ 7 ರಾತ್ರಿಯಿಂದ ನಾಪತ್ತೆಯಾಗಿದ್ದ ಬಾಲಕನ ಪತ್ತೆಗಾಗಿ ಬಳ್ಳಾರಿ ಪೊಲೀಸರು ಪ್ರತ್ಯೇಕ ಏಳು ತಂಡ ರಚನೆ ಮಾಡಿದ್ದರು. ಬಳ್ಳಾರಿ ನಗರದ ಸುಮಾರು 7 ಸಾವಿರ ಸಿಸಿಟಿವಿ ಪರಿಶೀಲಿಸಿದ ಪೊಲೀಸರು, ಖಚಿತ ಮಾಹಿತಿ ಮೇರೆಗೆ ಬಾಲಕನನ್ನು ಪತ್ತೆ ಹಚ್ಚಿದ್ದಾರೆ.

ಬಳ್ಳಾರಿ: ಬಳ್ಳಾರಿಯಲ್ಲಿ ಖಾಸಗಿ ವಸತಿ ಶಾಲೆಯಲ್ಲಿ ಮಲಗಿದ್ದ ತನ್ನ ಸಹಪಾಠಿಗಳ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ ಓರ್ವನ ಸಾವಿಗೂ ಕಾರಣನಾಗಿದ್ದ ಬಾಲಕನನ್ನು ಪೊಲೀಸರು ಪತ್ತೆ ಹಚ್ಚಿ, ಬಂಧನಕ್ಕೊಳಪಡಿಸಿದ್ದಾರೆ.
ಮಾರ್ಚ್ 7 ರಾತ್ರಿಯಿಂದ ನಾಪತ್ತೆಯಾಗಿದ್ದ ಬಾಲಕನ ಪತ್ತೆಗಾಗಿ ಬಳ್ಳಾರಿ ಪೊಲೀಸರು ಪ್ರತ್ಯೇಕ ಏಳು ತಂಡ ರಚನೆ ಮಾಡಿದ್ದರು. ಬಳ್ಳಾರಿ ನಗರದ ಸುಮಾರು 7 ಸಾವಿರ ಸಿಸಿಟಿವಿ ಪರಿಶೀಲಿಸಿದ ಪೊಲೀಸರು, ಖಚಿತ ಮಾಹಿತಿ ಮೇರೆಗೆ ಬಾಲಕನನ್ನು ಪತ್ತೆ ಹಚ್ಚಿದ್ದಾರೆ.
ಕೊಲೆ ಆರೋಪಿ ಬಾಲಕನಿಗೆ ವೈದ್ಯರ ಮೂಲಕ ಕೌನ್ಸಿಲಿಂಗ್ ಮಾಡಿಸಿ, ಘಟನೆಗೆ ಕಾರಣ ಹುಡುಕುವ ಪ್ರಯತ್ನವನ್ನು ಪೊಲೀಸರು ಮಾಡುತ್ತಿದ್ದಾರೆ. ನಿಯಮಾನುಸಾರ ವೈದ್ಯರ ತಂಡ ವೈದ್ಯಕೀಯ ಪರೀಕ್ಷೆ ನಡೆಸುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆತನ ಕೃತ್ಯದ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ತನಿಖೆ ಮುಂದುುರದಿದೆ ಎಂದು ಹೇಳಿದ್ದಾರೆ.
ಪ್ರಾಥಮಿಕ ತನಿಖೆ ಪ್ರಕಾರ, ವಸತಿಗೃಹದಲ್ಲಿ ವಾರ್ಡನ್ ಮೇಲ್ವಿಚಾರಣೆಯಲ್ಲಿ ಒಟ್ಟು ಒಂಬತ್ತು ವಿದ್ಯಾರ್ಥಿಗಳಿದ್ದರು. ಊಟದ ನಂತರ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ನಿದ್ರಿಸುತ್ತಿದ್ದಾಗ ಆರೋಪಿ ಬಾಲಕ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ರಾಡ್ ಮತ್ತು ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿದ್ದಾನೆಂದು ತಿಳಿದುಬಂದಿದೆ.
ಈ ದಾಳಿಯಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದು, ಇನ್ನೂ ಏಳು ಮಂದಿ ಗಾಯಗೊಂಡಿದ್ದಾರೆ. ಸಣ್ಣ ವಿಚಾರಕ್ಕೆ ನಡೆದಿರುವ ಜಗಳದಿಂದ ಘಟನೆ ನಡೆದಿರಬಹುದು ಎಂದು ಶಂಕಿಸಲಾಗುತ್ತಿದೆ. ಈ ಸಂಬಂಧ ಬ್ರೂಸ್‌ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

ಬಳ್ಳಾರಿ ವಸತಿ ಶಾಲೆಯಲ್ಲಿ ಅಘಾತಕಾರಿ ಘಟನೆ: ಸಹಪಾಠಿಗಳ ಮೇಲೆ ವಿದ್ಯಾರ್ಥಿ ದಾಳಿ; ಓರ್ವ ಸಾವು, 7 ಮಂದಿ ಸ್ಥಿತಿ ಗಂಭೀರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


