ರಾಜ್ಯ

ಗುತ್ತಿಗೆದಾರರ ಬಾಕಿ ಬಿಲ್‌ ಒಂದೇ ಬಾರಿ ಪಾವತಿ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಮುಖ್ಯಮಂತ್ರಿ ಸ್ವತಃ ಹಣಕಾಸು ಇಲಾಖೆಯನ್ನೂ ನೋಡಿಕೊಳ್ಳುತ್ತಿರುವುದರಿಂದ ಈ ವಿಷಯದ ಕುರಿತು ಸಭೆ ಕರೆದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ಗುತ್ತಿಗೆದಾರರ ಬಾಕಿ ಬಿಲ್‌ ಒಂದೇ ಬಾರಿ ಪಾವತಿ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ ಮತ್ತು ಸಿದ್ದರಾಮಯ್ಯ(ಸಂಗ್ರಹ ಚಿತ್ರ)
Published On :

ಬೆಳಗಾವಿ: ರಾಜ್ಯದ ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ಒಂದೇ ಬಾರಿ ಪಾವತಿಸಲು ಸಾಧ್ಯವಾಗುವುದಿಲ್ಲ. ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿಯವರು ತಿಳಿಸಿದ್ದಾರೆ.

ಸೋಮವಾರ ಮಾತನಾಡಿದ ಅವರು, ಈ ವಿಷಯವನ್ನು ಮುಖ್ಯಮಂತ್ರಿಯಾಗಿರುವ ಹಾಗೂ ಹಣಕಾಸು ಇಲಾಖೆಯ ಹೊಣೆ ಹೊತ್ತಿರುವ ಸಿದ್ದರಾಮಯ್ಯ ಅವರು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ಸ್ವತಃ ಹಣಕಾಸು ಇಲಾಖೆಯನ್ನೂ ನೋಡಿಕೊಳ್ಳುತ್ತಿರುವುದರಿಂದ ಈ ವಿಷಯದ ಕುರಿತು ಸಭೆ ಕರೆದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದರು.

ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ತೀರಿಸಲು ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡುವುದರಿಂದ ಸಮಸ್ಯೆ ಸುಲಭವಾಗಿ ನಿರ್ವಹಿಸಬಹುದು ಎಂದು ಅಭಿಪ್ರಾಯಪಟ್ಟರು.

ಬಜೆಟ್‌ನಲ್ಲಿ ವಿಶೇಷವಾಗಿ ಈ ಬಾಕಿ ಪಾವತಿಗೆ ಅನುದಾನ ಮೀಸಲು ಮಾಡಿದರೆ ಪಾವತಿ ಪ್ರಕ್ರಿಯೆ ಸುಗಮವಾಗುತ್ತದೆ. ಈ ಬಗ್ಗೆ ಅಂತಿಮ ನಿರ್ಧಾರವನ್ನು ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿಯವರೇ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಹಳೆಯ ಬಾಕಿಗಳ ಬಹುಪಾಲು ಪಾವತಿಸಲಾಗಿದೆ. ಆದರೆ, ಇತ್ತೀಚೆಗೆ ಪೂರ್ಣಗೊಂಡ ಕಾಮಗಾರಿಗಳ ಬಿಲ್‌ಗಳು ಇನ್ನೂ ಬಾಕಿಯಿವೆ. ಎಲ್ಲಾ ಬಿಲ್‌ಗಳನ್ನು ಒಂದೇ ಬಾರಿ ಬಿಡುಗಡೆ ಮಾಡಲು ಸರ್ಕಾರಕ್ಕೆ ಸಾಧ್ಯವಾಗುವುದಿಲ್ಲ. ಅವುಗಳನ್ನು ಹಂತ ಹಂತವಾಗಿ ಪಾವತಿಸಲಾಗುತ್ತದೆ ಎಂದರು.

ಇದೇ ವೇಳೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ನಡುವೆ ಸಭೆ ಏರ್ಪಡಿಸುವುದಾಗಿ ತಿಳಿಸಿದ ಅವರು, ಸಭೆಯ ನಂತರ ಸ್ಪಷ್ಟ ಕಾರ್ಯಯೋಜನೆ ರೂಪಿಸಲಾಗುತ್ತದೆ ಎಂದರು.

ಇದೇ ವೇಳೆ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಹೇಳಿದ ಸಚಿವರು, ಸೇತುವೆ ನಿರ್ಮಾಣಕ್ಕೆ ರೂ.2,000 ಕೋಟಿ ಅನುದಾನ ಮೀಸಲಿಡಲಾಗಿದೆ. ಈ ಯೋಜನೆಗಳು ಸುಮಾರು 80 ರಿಂದ 100 ವಿಧಾನಸಭಾ ಕ್ಷೇತ್ರಗಳನ್ನು ಸಂಪರ್ಕಿಸುವಂತೆ ರೂಪಿಸಲಾಗಿದೆ ಎಂದು ವಿವರಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳಡಿ ನೀಡುವ ಹಣದ ಪಾವತಿಯಲ್ಲಿ 2–3 ತಿಂಗಳ ವಿಳಂಬವಾಗಬಹುದು. ಆದರೆ, ಫಲಾನುಭವಿಗಳಿಗೆ ಹಣ ತಲುಪುತ್ತದೆ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.