ದೇಶದಲ್ಲಿ LPG ಸಿಲಿಂಡರ್ ಕೊರತೆ: ಧ್ವನಿ ಎತ್ತದ ಬಿಜೆಪಿ ಸಂಸದರ ವಿರುದ್ಧ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ!
ಸಿಲಿಂಡರ್ ಕೊರತೆಯು ರಾಜ್ಯದಲ್ಲಿ ಗಂಭೀರ ಕಳವಳಕಾರಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಉಂಟಾಗಿರುವ ತೀವ್ರ ವ್ಯತ್ಯಯ ಸುಧಾರಣೆಯಾಗದಿದ್ದಲ್ಲಿ, ಬೆಂಗಳೂರು ಹೋಟೆಲ್‌ಗಳ ಸಂಘವು ನಗರದಾದ್ಯಂತ ಹೋಟೆಲ್‌ಗಳನ್ನು ಬಂದ್ ಮಾಡಲು ತೀರ್ಮಾನಿಸಿದೆ.
ಈ ಮಧ್ಯೆ ಸಿಲಿಂಡರ್ ಕೊರತೆಯು ರಾಜ್ಯದಲ್ಲಿ ಗಂಭೀರ ಕಳವಳಕಾರಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಈ ಸಮಸ್ಯೆ ಕುರಿತು ಸಂಸತ್ತಿನಲ್ಲಿ ಚರ್ಚಿಸಬೇಕು. ಕೊರತೆಯು ಉದ್ಯಮಗಳು ಮತ್ತು ಸಾರ್ವಜನಿಕರ ಮೇಲೆ ಪರಿಣಾಮ ಬೀರುವುದರಿಂದ ಸಂಸತ್ತಿನ ಸದಸ್ಯರು ಈ ವಿಷಯವನ್ನು ಪ್ರಸ್ತಾಪಿಸಬೇಕೆಂದು ಒತ್ತಾಯಿಸಿದರು. ಈ ಬಗ್ಗೆ ಸರ್ಕಾರ ಸಂಸತ್ತಿನಲ್ಲಿ ಚರ್ಚಿಸಬೇಕು. ಅವರು ಇಂದು ಚರ್ಚೆಗೆ ಅವಕಾಶ ನೀಡಬೇಕು. ಇಂದಿನಿಂದ ನಾವು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಅಡುಗೆ ಅನಿಲ ಸಿಲಿಂಡರ್ ಸಂಗ್ರಹ ಇಲ್ಲ ಎಂದು ಅವರು ಹೇಳಿದರು.
ಹೋಟೆಲ್‌ಗಳಂತಹ ವ್ಯವಹಾರದ ಮೇಲೆ ಎಲ್‌ಪಿಜಿ ಕೊರತೆ ಪರಿಣಾಮ ಬೀರಿದ್ದರೂ ಬಿಜೆಪಿ ಸಂಸದರು ಅದರ ಬಗ್ಗೆ ಮಾತನಾಡುತ್ತಿಲ್ಲ. ಪೂರೈಕೆ ಕೊರತೆಯಿಂದ ಹೋಟೆಲ್ ಮಾಲೀಕರು ಈಗಾಗಲೇ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.
ಅಡುಗೆ ಅನಿಲ ದರ ಏರಿಕೆ ಹಾಗೂ ಕೊರತೆಯಿಂದಾಗಿ ಈಗ ಜನರು ಪ್ರತಿಭಟನೆಗೆ ಇಳಿದಿದ್ದಾರೆ. ಆದರೆ, ಬಿಜೆಪಿ ಸಂಸದರು ಇದರ ಬಗ್ಗೆ ಮಾತನಾಡುತ್ತಿಲ್ಲ. ಬೇರೆ ಬೇರೆ ವಿಷಯಗಳ ಬಗ್ಗೆ ಸಾಕಷ್ಟು ಮಾತನಾಡುವ ಬಿಜೆಪಿ ಸಂಸದರು ಈಗ ಸಿಲಿಂಡರ್ ಬಗ್ಗೆ ಮೌನ ವಹಿಸಿದ್ದಾರೆ. ತೈಲ ಬೆಲೆ ಏರಿಕೆಯಾಗುತ್ತಿದ್ದಂತೆ ಡೀಸೆಲ್ ಬೆಲೆಯೂ ಇತ್ತೀಚಿಗೆ ಹೆಚ್ಚಾಗಿದ್ದು, ವ್ಯವಹಾರದ ಮತ್ತಷ್ಟು ಪರಿಣಾಮ ಬೀರಿದೆ ಎಂದರು.
ಇಂಧನ ಬೆಲೆ ಏರಿಕೆ ಮತ್ತು ಎಲ್‌ಪಿಜಿ ಸಿಲಿಂಡರ್ ಕೊರತೆಯ ಪರಿಣಾಮ ಆತಿಥ್ಯ ಕ್ಷೇತ್ರದ ಮೇಲೆ ಪರಿಣಾಮ ಬೀರುತ್ತಿದೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಕೂಡ ಕರ್ನಾಟಕಕ್ಕೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ಮಾತನಾಡಿದ್ದು, ಚರ್ಚೆಗೆ ಒತ್ತಾಯಿಸಿದ್ದಾರೆ. ಮೇಕೆದಾಟು, ಎತ್ತಿನಹೊಳೆ ಯೋಜನೆಗಳ ಬಗ್ಗೆ ಮಾತನಾಡುತ್ತಿದ್ದಾರೆ. ಸಂಸತ್ತಿನಲ್ಲಿ ಈಗ ಇಂಧನ ಕೊರತೆ ಬಗ್ಗೆ ಮಾತನಾಡುವಂತೆ ಅವರು ತಮ್ಮ ಪಕ್ಷದ ಸಂಸದರಿಗೆ ನಿರ್ದೇಶನ ನೀಡಲಿ. ಅವರ ವಯಸ್ಸನ್ನು ಪರಿಗಣಿಸಿ ಅವರ ವಿರುದ್ಧ ಮಾತನಾಡಲ್ಲ. ಮೇಕೆದಾಟು ಮತ್ತು ಎತ್ತಿನಹೊಳೆಗೆ ಪರಿಹಾರ ಸೂಚಿಸಲಿ. ಅವರ ಪಕ್ಷದ ಶಾಸಕರು, ಅವರ ಪಕ್ಷ ಏನು ಮಾಡಿದೆ ಎಂಬುದರ ಬಗ್ಗೆ ಮಾತನಾಡಲಿ, ನಾವು ಏನು ಮಾಡಿದ್ದೇವೆ ಎಂಬುದನ್ನು ಹೇಳುತ್ತವೆ ಎಂದು ಶಿವಕುಮಾರ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



