ಹನಿಟ್ರ್ಯಾಪ್: ಬೆಳಗಾವಿಯಲ್ಲಿ ಶ್ರೀಮಂತ ಪುರುಷರನ್ನು ಖೆಡ್ಡಾಗೆ ಬೀಳಿಸುತ್ತಿದ್ದ ಫ್ಯಾಷನ್ ಡಿಸೈನರ್ ಬಂಧನ!
ಫ್ಯಾಶನ್ ಡಿಸೈನರ್ ಆಗಿರುವ ದೀಪಾ, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಪರಿಚಯ ಮಾಡಿಕೊಂಡು ಬಳಿಕ ಲಾಡ್ಜ್ಗೆ ಕರೆಸಿ ಅವರ ಬಳಿ ಇದ್ದ ಹಣ, ಚಿನ್ನ ಸೇರಿ ಅಮೂಲ್ಯ ವಸ್ತುಗಳನ್ನೆಲ್ಲಾ ದೋಚುತ್ತಿದ್ದಳು.

ಬೆಳಗಾವಿ: ಸಾಮಾಜಿಕ ಮಾಧ್ಯಮಗಳ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಪರಿಚಯ ಮಾಡಿಕೊಂಡು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸುತ್ತಿದ್ದ ಮಹಿಳೆಯನ್ನು ಬೆಳಗಾವಿಯ ಟಿಳಕವಾಡಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಎಂದು ಗುರುತಿಸಲಾಗಿದ್ದು, ಆಕೆಗೆ ಸಹಾಯ ಮಾಡುತ್ತಿದ್ದ ಆಪ್ತ ಶಿವಾನಂದ ಮಠಪತಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಫ್ಯಾಶನ್ ಡಿಸೈನರ್ ಆಗಿರುವ ದೀಪಾ, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಪರಿಚಯ ಮಾಡಿಕೊಂಡು ಬಳಿಕ ಲಾಡ್ಜ್ಗೆ ಕರೆಸಿ ಅವರ ಬಳಿ ಇದ್ದ ಹಣ, ಚಿನ್ನ ಸೇರಿ ಅಮೂಲ್ಯ ವಸ್ತುಗಳನ್ನೆಲ್ಲಾ ದೋಚುತ್ತಿದ್ದಳು ಎಂದು ಆರೋಪಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿವಾಸಿಯಾದ ಶಿವಾನಂದ್ ಮಠಪತಿ ಎಂಬಾತ ದೀಪಾಗೆ ಸಹಾಯ ಮಾಡುತ್ತಿದ್ದನು. ಯಾವ ಶ್ರೀಮಂತ ವ್ಯಕ್ತಿಗಳನ್ನು ಸಂಪರ್ಕಿಸಬೇಕು ಎಂಬ ಮಾಹಿತಿಯನ್ನು ಶಿವಾನಂದ್ ನೀಡುತ್ತಿದ್ದನು. ಹೀಗೆ ಬಂದ ಹಣವನ್ನು ಇಬ್ಬರೂ ಸೇರಿ ಖರ್ಚು ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಒಬ್ಬ ಉದ್ಯಮಿಯನ್ನು ಇದೇ ರೀತಿ ಲಾಡ್ಜ್ಗೆ ಕರೆಸಿಕೊಂಡು ವಂಚನೆ ಮಾಡಿದ ನಂತರ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಆಧರಿಸಿ ಪೊಲೀಸರು ಬೆಳಗಾವಿಯ ಹೋಟೆಲ್ನಲ್ಲಿ ಕಾರ್ಯಾಚರಣೆ ನಡೆಸಿ ದೀಪಾಳನ್ನು ಬಂಧಿಸಿದ್ದಾರೆ. ಈ ಹಿಂದೆಯೂ ಆಕೆಯ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು ಎನ್ನಲಾಗಿದೆ.
ಬಂಧಿತ ಆರೋಪಿ ಮಹಿಳೆಯಿಂದ ಸುಮಾರು 32 ಲಕ್ಷ 86 ಸಾವಿರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಂದು ಫಾರ್ಚೂನರ್ ಕಾರು, ಒಂದು ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು, 11 ಮೊಬೈಲ್ ಫೋನ್ಗಳು, ಒಂದು ಟ್ಯಾಬ್, ಒಂದು ಡಾಂಗಲ್, ಮೂರು ಕಾರಿನ ಕೀಗಳು ಹಾಗೂ 14 ಸಾವಿರ ರೂಪಾಯಿ ನಗದು ಸೇರಿದಂತೆ ಹಲವು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



