ರಾಜ್ಯ

ರಾಜ್ಯದಲ್ಲಿ ಹೆಚ್ಚುತ್ತಿದೆ ಬಿಸಿಲ ಧಗೆ; ಕರಾವಳಿ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಹಲವಾರು ಜಿಲ್ಲೆಗಳು ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸುತ್ತಿದ್ದು, ಜನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿದೆ ಬಿಸಿಲ ಧಗೆ; ಕರಾವಳಿ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಣೆ
ಸಾಂದರ್ಭಿಕ ಚಿತ್ರ — PTI
Published On :

ಮಂಗಳೂರು: ರಾಜ್ಯಾದ್ಯಂತ ಬಿಸಿಲ ಧಗೆ ಹೆಚ್ಚಾಗುತ್ತಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.

ರಾಜ್ಯದ ಹಲವಾರು ಜಿಲ್ಲೆಗಳು ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸುತ್ತಿದ್ದು, ಜನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಯಲ್ಲೋ ಅಲರ್ಟ ಘೋಷಿಸಲಾಗಿದ್ದು, ನಾಳೆ ಮತ್ತು ನಾಡಿದ್ದು ಹೆಚ್ಚಿನ ಬಿಸಿಲು ಮತ್ತು ಉಷ್ಣತೆ ಹೆಚ್ಚಾಗಲಿದೆ. ಇದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಮಾರ್ಚ್ 11 ರಂದು ಬೆಳಗ್ಗೆ 8.30ಕ್ಕೆ ಕೊನೆಗೊಳ್ಳುವ 24 ಗಂಟೆಗಳ ಅವಧಿಗೆ ಐಎಂಡಿ ಬಿಡುಗಡೆ ಮಾಡಿದ ದತ್ತಾಂಶವು ಕರ್ನಾಟಕದ ಹಲವು ಭಾಗಗಳಲ್ಲಿ 33°C ಮತ್ತು 37°C ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ತೋರಿಸುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ತಾಪಮಾನ ಅಂದರೆ 37°C ತಾಪಮಾನ ದಾಖಲಾಗಿದ್ದರೆ, ಉಡುಪಿಯಲ್ಲಿ 35.8°C ಕನಿಷ್ಠ ತಾಪಮಾನ ದಾಖಲಾಗಿದೆ. ತುಲನಾತ್ಮಕವಾಗಿ ಹೆಚ್ಚಿನ ಕನಿಷ್ಠ ತಾಪಮಾನ 24°C ಆಗಿದೆ. ಉತ್ತರ ಕನ್ನಡದಲ್ಲಿ ಗರಿಷ್ಠ ತಾಪಮಾನ 36.6°C ಮತ್ತು ಕನಿಷ್ಠ ತಾಪಮಾನ 21.2°C ದಾಖಲಾಗಿದೆ.

ಇನ್ನು ಕರ್ನಾಟಕದ ಹಲವಾರು ಒಳನಾಡಿನ ಜಿಲ್ಲೆಗಳು ಸಹ ಈ ಅವಧಿಯಲ್ಲಿ ಹೆಚ್ಚಿನ ತಾಪಮಾನವನ್ನು ದಾಖಲಿಸಿವೆ. ಅವುಗಳಲ್ಲಿ, ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ 36.6°C, ಹಾವೇರಿಯಲ್ಲಿ 36.4°C ದಾಖಲಾಗಿದೆ.

ಬೀದರ್‌ನಲ್ಲಿ 36.3°C ಮತ್ತು ರಾಯಚೂರಿನಲ್ಲಿ 36.1°C ದಾಖಲಾಗಿದೆ. ಬಾಗಲಕೋಟೆ (35.9°C), ಬೆಳಗಾವಿ (35.4°C), ಶಿವಮೊಗ್ಗ (35.3°C) ಮತ್ತು ಬಳ್ಳಾರಿ (35°C) ಜಿಲ್ಲೆಗಳಲ್ಲಿಯೂ ಹಗಲಿನ ತಾಪಮಾನ ಹೆಚ್ಚಾಗಿದೆ. ಇದು ರಾಜ್ಯದ ಹಲವಾರು ಭಾಗಗಳಲ್ಲಿ ಬಿಸಿಲು ಕ್ರಮೇಣ ಏರಿಕೆಯಾಗುವುದನ್ನು ಸೂಚಿಸುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.