ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಅಪಹರಿಸಿ ಕೊಲೆ: ಇಬ್ಬರು ಅಪ್ರಾಪ್ತರು ಸೇರಿ 8 ಜನರ ಬಂಧನ
ಕಳೆದ ಭಾನುವಾರ ಬೆಂಗಳೂರಿನ ಹೊರ ವಲಯದಲ್ಲಿ ಸಿನಿಮಾ ಸ್ಟೈಲ್ನಲ್ಲಿ ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಗೋಪಾಲ್(30) ಅಲಿಯಾಸ್ ಗೋಪಿ ಸೋಮವಾರ ತಮಿಳುನಾಡಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಅಪಹರಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಕಳೆದ ಭಾನುವಾರ ಬೆಂಗಳೂರಿನ ಹೊರ ವಲಯದಲ್ಲಿ ಸಿನಿಮಾ ಸ್ಟೈಲ್ನಲ್ಲಿ ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಗೋಪಾಲ್(30) ಅಲಿಯಾಸ್ ಗೋಪಿ ಸೋಮವಾರ ತಮಿಳುನಾಡಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕೊಲೆಯ ಹಿಂದಿನ ಪ್ರಮುಖ ಸಂಚುಕೋರ, ಪ್ರಮುಖ ಆರೋಪಿ ಮೋಹನ್ ಬಾಬು ಅವರನ್ನು ಪೊಲೀಸರು ಸೋಮವಾರ ಬಂಧಿಸಿದ್ದರು. ಇದೀಗ ಮತ್ತೆ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
"ಗೋಪಾಲ್ ಅವರನ್ನು ಅಪಹರಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಎಂಟು ಜನರನ್ನು ಬಂಧಿಸಿದ್ದೇವೆ. ಅವರಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರು. ಪಿತೂರಿಯಲ್ಲಿ ಭಾಗವಾಗಿದ್ದ ಇತರ ಸಹಚರರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣವನ್ನು ಪ್ರಸ್ತುತ ಸಿಐಡಿ ತಂಡ ತನಿಖೆ ನಡೆಸುತ್ತಿದೆ.
ಪೊಲೀಸರ ಪ್ರಕಾರ, ಭಾನುವಾರ, ಗೋಪಾಲ್ ಮತ್ತು ಅವರ ಸ್ನೇಹಿತ ಸತೀಶ್ ಅತ್ತಿಬೆಲೆಯಿಂದ ಆನೇಕಲ್ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಆನೇಕಲ್ ತಾಲ್ಲೂಕಿನ ಕರ್ಪುರ ಗೇಟ್ ಬಳಿ ಗೋಪಿ ಅವರನ್ನು ಅಪಹರಿಸಲಾಗಿದೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಡೆಂಕನಿಕೊಟ್ಟೈ ಬಳಿಯ ಅರಣ್ಯ ಪ್ರದೇಶಕ್ಕೆ ಅವರನ್ನು ಕರೆದೊಯ್ದು, ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



