ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ
ಹಾಡಹಗಲೇ ಕಾಫಿ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಡಿಕೇರಿ: ಇತ್ತೀಚಿಗೆ ಕೊಡಗಿನಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿದ್ದು, ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪ ಹೈಸ್ಕೂಲ್ ಪೈಸಾರಿಯಲ್ಲಿ ಕಾಫಿ ತೋಟಕ್ಕೆ ತೆರಳಿದ್ದ ಕಾಫಿ ಬೆಳೆಗಾರನ ಮೇಲೆ ಆನೆ ದಾಳಿ ಮಾಡಿದೆ.
ಆನೆ ದಾಳಿಗೊಳಗಾದ ರೈತ ಗಣಪತಿ(49) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾಡಹಗಲೇ ಕಾಫಿ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳಾದ ಸಿಸಿಎಫ್ ಸೋನಲ್ ವೃಷ್ಣಿ, ಡಿಸಿಎಫ್ ಅಭಿಷೇಕ್ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇತ್ತೀಚಿಗೆ ಕುಶಾಲನಗರ ತಾಲೂಕಿನ ವಾಲ್ನೂರಿನಲ್ಲಿ ನಂಜರಾಯಪಟ್ಟಣ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಜಲಜಾಕ್ಷಿ ಎಂಬವರು ಆನೆ ದಾಳಿಯಿಂದ ಮೃತಪಟ್ಟಿದ್ದರು. ಈ ಸಾವು ಮಾಸುವ ಮುನ್ನವೇ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ.
ಕೊಡಗಿನಲ್ಲಿ ಕಳೆದ 12 ದಿನಗಳ ನಡೆದ ಮೂರನೇ ಆನೆ ದಾಳಿ ಇದಾಗಿದ್ದು, ಜಿಲ್ಲೆಯಾದ್ಯಂತ ನೂರಾರು ರೈತರು ತೀವ್ರ ಆಕ್ರೋಶಗೊಂಡಿದ್ದಾರೆ. ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿ, ವನ್ಯಜೀವಿ ಸಂಘರ್ಷದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವ ಇಲಾಖೆಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದರು.
ಜಿಲ್ಲೆಯ ಮದೆನಾಡು ಮತ್ತು ವಲ್ನೂರು ವ್ಯಾಪ್ತಿಯಲ್ಲಿ ಇತ್ತೀಚೆಗೆ 19 ವರ್ಷದ ಬಾಲಕಿ ಮತ್ತು 50 ವರ್ಷದ ಮಹಿಳೆ ಸಾವನ್ನಪ್ಪಿದ ನಂತರ 12 ದಿನಗಳಲ್ಲಿ ವರದಿಯಾದ ಮೂರನೇ ಸಾವು ಇದಾಗಿದೆ. ಮೂರು ತಿಂಗಳಲ್ಲಿ ಜಿಲ್ಲೆಯಲ್ಲಿ ಕಾಡಾನೆ ದಾಳಿಯಲ್ಲಿ ಒಟ್ಟು ಐದು ಜನರು ಪ್ರಾಣ ಕಳೆದುಕೊಂಡಿದ್ದು, ಕೊಡಗಿನಾದ್ಯಂತ ಗ್ರಾಮಸ್ಥರು ಮತ್ತು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಜಿಲ್ಲೆಯಾದ್ಯಂತ ರೈತರ ಬೆಂಬಲದೊಂದಿಗೆ ನೂರಾರು ಗ್ರಾಮಸ್ಥರು ಸಿದ್ದಾಪುರದ ಘಟನಾ ಸ್ಥಳದಲ್ಲಿ ಜಮಾಯಿಸಿ ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದರು. ವನ್ಯಜೀವಿಗಳು ಗ್ರಾಮಗಳಿಗೆ ನುಗ್ಗುವುದನ್ನು ತಡೆಯುವಲ್ಲಿ ವಿಫಲವಾದ ಅರಣ್ಯ ಇಲಾಖೆಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



