ಬಿಸಿಯೂಟ ತಯಾರಿಕೆಗೆ ಶಾಲಾ ಮಕ್ಕಳಿಂದ ಕೆಲಸ: ವ್ಯಾಪಕ ಆಕ್ರೋಶ, ಮಕ್ಕಳ ರಕ್ಷಣಾ ಆಯೋಗದಿಂದ ಸ್ವಯಂ ಪ್ರೇರಿತ ದೂರು
ಕಲಬುರಗಿ ಜಿಲ್ಲೆಯ ಚಿತ್ತಾಪುರ, ನಾಲ್ವಾರ್ ಮತ್ತು ವಾಡಿ ವ್ಯಾಪ್ತಿಯ ಕೆಲವು ಶಾಲೆಗಳಲ್ಲಿ ಮಧ್ಯಾಹ್ನದ ಊಟ ತಯಾರಿಸಲು ಅಡುಗೆ ಸಿಬ್ಬಂದಿಗೆ ಸಹಾಯ ಮಾಡಲು ವಿದ್ಯಾರ್ಥಿಗಳಿಂದ ದೂರದ ಸ್ಥಳಗಳಿಂದ ಕುಡಿಯುವ ನೀರನ್ನು ಹೊತ್ತು ತರಿಸಲಾಗುತ್ತಿದೆ ಎನ್ನಲಾಗಿದೆ.

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಕೆಲಸಗಳನ್ನು ಮಾಡಿಸಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ, ನಾಲ್ವಾರ್ ಮತ್ತು ವಾಡಿ ವ್ಯಾಪ್ತಿಯ ಕೆಲವು ಶಾಲೆಗಳಲ್ಲಿ ಮಧ್ಯಾಹ್ನದ ಊಟ ತಯಾರಿಸಲು ಅಡುಗೆ ಸಿಬ್ಬಂದಿಗೆ ಸಹಾಯ ಮಾಡಲು ವಿದ್ಯಾರ್ಥಿಗಳಿಂದ ದೂರದ ಸ್ಥಳಗಳಿಂದ ಕುಡಿಯುವ ನೀರನ್ನು ಹೊತ್ತು ತರಿಸಲಾಗುತ್ತಿದೆ ಎನ್ನಲಾಗಿದೆ.
ಈ ಕುರಿತು ಆಯೋಗದ ಅಧ್ಯಕ್ಷ ಶಶಿಧರ್ ಕೊಸಂಬೆ ಅವರು ಬುಧವಾರ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಪತ್ರ ಬರೆದು ಸ್ಪಷ್ಟನೆ ಕೇಳಿದ್ದಾರೆ.
ಕೆಲ ಶಾಲೆಗಳಲ್ಲಿ ಸಿಬ್ಬಂದಿ ಕೊರತೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಂದ ತರಕಾರಿ ಕತ್ತರಿಸುವ ಕೆಲಸವನ್ನೂ ಮಾಡಿಸಲಾಗುತ್ತಿದೆ ಎಂಬ ಮಾಹಿತಿ ದೊರೆತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದೆ ವಿದ್ಯಾಭ್ಯಾಸ ಮಾಡಲು ಶಾಲೆಗಳಲ್ಲಿ ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ ತಕ್ಷಣ ಮಾಡಬೇಕು. ಜೊತೆಗೆ ಕೈಗೊಂಡ ಕ್ರಮಗಳ ಕುರಿತು ಐದು ದಿನಗಳೊಳಗೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ್ದಾರೆಂದು ತಿಳಿದುಬಂದಿದೆ.
ವಿದ್ಯಾರ್ಥಿಗಳಿಂದ ಇಂತಹ ಕೆಲಸಗಳನ್ನು ಮಾಡಿಸಬಾರದು ಎಂಬ ನಿಯಮಗಳಿದ್ದರೂ ಈ ರೀತಿಯ ಘಟನೆಗಳು ವರದಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು, ಶಿಕ್ಷಕರು, ಅಧಿಕಾರಿಗಳ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



