ರಾಜ್ಯ

ಕೊಡಗಿನಲ್ಲಿ ಕಾಫಿ ಬೆಳೆಗಾರನ ಬಲಿ ಪಡೆದಿದ್ದ ಕಾಡಾನೆ ಸೆರೆ

38 ರಿಂದ 40 ವರ್ಷ ವಯಸ್ಸಿನ ಈ ಕಾಡಾನೆಯನ್ನು ಸೆರೆಹಿಡಿದು ಜಿಲ್ಲೆಯ ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.

ಕೊಡಗಿನಲ್ಲಿ ಕಾಫಿ ಬೆಳೆಗಾರನ ಬಲಿ ಪಡೆದಿದ್ದ ಕಾಡಾನೆ ಸೆರೆ
ಸೆರೆ ಸಿಕ್ಕ ಆನೆ
Published On :

ಮಡಿಕೇರಿ: ಕೊಡಗಿನ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಗುಹ್ಯದಲ್ಲಿ ಗುರುವಾರ ಕಾಫಿ ಬೆಳೆಗಾರನನ್ನು ಕೊಂದಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಶುಕ್ರವಾರ ಸೆರೆಹಿಡಿದಿದೆ.

38 ರಿಂದ 40 ವರ್ಷ ವಯಸ್ಸಿನ ಈ ಕಾಡಾನೆಯನ್ನು ಸೆರೆಹಿಡಿದು ಜಿಲ್ಲೆಯ ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.

ಕಾಡಾನೆ ದಾಳಿಯಲ್ಲಿ ಗುಹ್ಯದ ಕಾಫಿ ಬೆಳೆಗಾರ ಗಣಪತಿ(ಗಪ್ಪು) ಮೃತಪಟ್ಟಿದ್ದರು. ಕೊಡಗಿನಲ್ಲಿ ಕಳೆದ 12 ದಿನಗಳ ನಡೆದ ಮೂರನೇ ಆನೆ ದಾಳಿ ಇದಾಗಿದ್ದು, ಜಿಲ್ಲೆಯಾದ್ಯಂತ ನೂರಾರು ರೈತರು ತೀವ್ರ ಆಕ್ರೋಶಗೊಂಡಿದ್ದಾರೆ. ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿ, ವನ್ಯಜೀವಿ ಸಂಘರ್ಷದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವ ಇಲಾಖೆಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದರು.

ಈ ಬೆಳವಣಿಗೆ ನಂತರ, ಇಲಾಖೆಗೆ ಕಾಡಾನೆಯನ್ನು ಸೆರೆಹಿಡಿಯಲು ರಾಜ್ಯ ಸರ್ಕಾರದಿಂದ ತಕ್ಷಣ ಅನುಮತಿ ಸಿಕ್ಕಿತು ಮತ್ತು ಇಲಾಖೆ ಗುರುವಾರ ಸಂಜೆ ಸಂಘರ್ಷ ವಲಯದಲ್ಲಿ ಶಿಬಿರ ಸ್ಥಾಪಿಸಿತು. ಆನೆ ಸೆರೆಹಿಡಿಯುವ ಕಾರ್ಯಾಚರಣೆಗೆ ಬೆಂಬಲವಾಗಿ ಆರು ಪಳಗಿದ ಆನೆಗಳನ್ನು ಸ್ಥಳಕ್ಕೆ ಕರೆತರಲಾಯಿತು. ಅಲ್ಲದೆ ಆನೆಯನ್ನು ಪತ್ತೆಹಚ್ಚಲು ಥರ್ಮೋ ಡ್ರೋನ್‌ಗಳು ಮತ್ತು ಇತರ ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಯಿತು.

ಆನೆ ಸೆರೆಹಿಡಿಯುವ ಕಾರ್ಯಾಚರಣೆ ಇಂದು ಬೆಳಗ್ಗೆ ಪ್ರಾರಂಭವಾಯಿತು ಮತ್ತು ಸಂಜೆ ವೇಳೆ ಅರಣ್ಯ ಇಲಾಖೆ, ಗಂಡು ಆನೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಯಿತು. ಘಟನೆ ನಡೆದ ಸ್ಥಳದಿಂದ ಸುಮಾರು 15 ಕಿ.ಮೀ ದೂರ ಕ್ರಮಿಸಿದ್ದ ಆನೆಯನ್ನು ಹುಂಡಿ ಗ್ರಾಮದಲ್ಲಿ ಸೆರೆಹಿಡಿಯಲಾಗಿದೆ ಎಂದು ಮೂಲಗಳು ದೃಢಪಡಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.