ರಾಜ್ಯ

ಕೋಲಾರ: ಕಲ್ಲು ಕ್ವಾರಿಯಲ್ಲಿ ಸ್ಫೋಟ; 3 ಕಾರ್ಮಿಕರಿಗೆ ಗಂಭೀರ ಗಾಯ..!

ಆಂಡರ್ಸನ್‌ಪೇಟೆ ಪೊಲೀಸ್ ವ್ಯಾಪ್ತಿಯ ಬಾಣಗೆರೆ ಗ್ರಾಮದ ಸರ್ವೆ ಸಂಖ್ಯೆ 139 ರಲ್ಲಿ ಬೆಳಿಗ್ಗೆ 10.15 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಎಸ್‌ಪಿ ಶಿವಾಂಶು ರಜಪೂತ್ ತಿಳಿಸಿದ್ದಾರೆ.

ಕೋಲಾರ: ಕಲ್ಲು ಕ್ವಾರಿಯಲ್ಲಿ ಸ್ಫೋಟ; 3 ಕಾರ್ಮಿಕರಿಗೆ ಗಂಭೀರ ಗಾಯ..!
ಘಟನಾ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು.
Published On :

ಕೋಲಾರ: ಕಲ್ಲು ಕ್ವಾರಿ ಸ್ಫೋಟದಿಂದ ಮೂವರು ಕಾರ್ಮಿಕರಿಗೆ ಗಂಭೀರ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿ ಎಫ್ ತಾಲೂಕಿನ ಮಾರಿಕುಪ್ಪಂ ಬಳಿ ನಡೆದಿದೆ.

ಆಂಡರ್ಸನ್‌ಪೇಟೆ ಪೊಲೀಸ್ ವ್ಯಾಪ್ತಿಯ ಬಾಣಗೆರೆ ಗ್ರಾಮದ ಸರ್ವೆ ಸಂಖ್ಯೆ 139 ರಲ್ಲಿ ಬೆಳಿಗ್ಗೆ 10.15 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಎಸ್‌ಪಿ ಶಿವಾಂಶು ರಜಪೂತ್ ತಿಳಿಸಿದ್ದಾರೆ.

ಗಾಯಾಳುಗಳನ್ನು ವೆಂಕಟನೂರು ಗ್ರಾಮದ ಮಾರಿ (60) ಮತ್ತು ಲಾಲ್ಕುಟೈ ಗ್ರಾಮದ ಮುನಿಯಪ್ಪ (58) ಮತ್ತು ಗೋವಿಂದ (60) ಎಂದು ಗುರುತಿಸಲಾಗಿದೆ.

ಇವರೆಲ್ಲರೂ ಧರ್ಮಪುರಿ ಜಿಲ್ಲೆಯವರಾಗಿದ್ದು, ಮೂವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಕ್ವಾರಿಯಲ್ಲಿ ತೋಡಿದ ರಂಧ್ರಗಳಲ್ಲಿ ಸ್ಫೋಟಕ ವಸ್ತು ತುಂಬುವ ವೇಳೆ ಉಂಟಾದ ಕಿಡಿಯಿಂದ ಬೆಂಕಿ ಕಾಣಿಸಿಕೊಂಡಿದ್ದು, ಅದರಿಂದ ಸ್ಫೋಟ ಸಂಭವಿಸಿ ಕಾರ್ಮಿಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಘಟನೆಯ ವೇಳೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಪೆರಿಯಸ್ವಾಮಿ, ಅಂಬು, ರಮೇಶ್ವರನ್ ಮತ್ತು ಕೃಷ್ಣ ಎಂಬ ಕಾರ್ಮಿಕರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಮಿಳುನಾಡಿನ ಧರ್ಮಪುರಿ ಜಿಲ್ಲೆಯಿಂದ ಕಾರ್ಮಿಕರನ್ನು ಕಂದಸ್ವಾಮಿ ಎಂಬ ಗುತ್ತಿಗೆದಾರ ನೇಮಿಸಿಕೊಂಡಿದ್ದಾಗಿ ವರದಿಯಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಎಸ್‌ಪಿ ಸ್ಫೋಟಕ ವಸ್ತು ತುಂಬುವ ವೇಳೆ ಕಿಡಿ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ದೃಢಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.