'ವಿಮಾನದಲ್ಲಿ ಬಾಂಬ್ ಇದ್ದರೆ ನಿಲ್ಲಲ್ವಾ..': ಪಶ್ಚಿಮ ಬಂಗಾಳದ DJ ಹೇಳಿಕೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿ, ವ್ಯಕ್ತಿ ಬಂಧನ
"ಬಾಂಬ್" ಎಂಬ ಪದದ ಉಲ್ಲೇಖವು ಭದ್ರತಾ ಕಾಳಜಿಯನ್ನು ಹುಟ್ಟುಹಾಕಿತು. ಹೀಗಾಗಿ ಅವರನ್ನು ಬಂಧಿಸಿ ಪೊಲೀಸರಿಗೆ ಹಸ್ತಾಂತರಿಸಲಾಯಿತು.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಬಾಂಬ್ ಬೆದರಿಕೆ ಹಾಕಿದ ಆರೋಪದ ಮೇಲೆ ಡಿಸ್ಕ್ ಜಾಕಿ (DJ) ಒಬ್ಬರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲಕ ಡಿಜೆ ರಜತೇಶ್ ಬೇರಾ ಬಂಧಿತ ವ್ಯಕ್ತಿ. ಮಾರ್ಚ್ 11ರಂದು ಬೆಂಗಳೂರಿನಿಂದ ರಾಯ್‌ಪುರಕ್ಕೆ ಹೋಗಬೇಕಿದ್ದ ಇಂಡಿಗೋ ವಿಮಾನ ಏರಲು ರಜತೇಶ್ ವಿಮಾನ ನಿಲ್ದಾಣಕ್ಕೆ ತಡವಾಗಿ ಬಂದಿದ್ದರು. ಹೀಗಾಗಿ ವಿಮಾನ ನಿಲ್ದಾಣದ ಸಿಬ್ಬಂದಿ ಇವರನ್ನು ಒಳಗೆ ಬಿಡಲು ನಿರಾಕರಿಸಿದಾಗ ಮಾತಿನ ಚಕಮಕಿ ನಡೆಸಿದ್ದಾರೆ.
ವಾಗ್ವಾದ ವೇಳೆ 'ವಿಮಾನದೊಳಗೆ ಬಾಂಬ್ ಇದ್ದರೆ ವಿಮಾನ ನಿಲ್ಲಲ್ವಾ..' ಎಂದು ಅವರು ಹೇಳಿದ್ದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ಬಾಂಬ್" ಎಂಬ ಪದದ ಉಲ್ಲೇಖವು ಭದ್ರತಾ ಕಾಳಜಿಯನ್ನು ಹುಟ್ಟುಹಾಕಿತು. ಹೀಗಾಗಿ ಅವರನ್ನು ಬಂಧಿಸಿ ಪೊಲೀಸರಿಗೆ ಹಸ್ತಾಂತರಿಸಲಾಯಿತು ಎಂದು ಹೇಳಿದ್ದಾರೆ.
ನಂತರ ನಿಯಮಾನುಸಾರ ಬಾಂಬ್ ಬೆದರಿಕೆ ಮೌಲ್ಯಮಾಪನ ಸಮಿತಿಯನ್ನು ರಚಿಸಿ ಹೇಳಿಕೆಯ ಗಂಭೀರತೆಯನ್ನು ಪರಿಶೀಲಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ವಿಮಾನ ಸಿಬ್ಬಂದಿ ನೀಡಿದ ದೂರಿನ ಆಧಾರದಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 125 (ಇತರರ ಜೀವ ಅಥವಾ ಸುರಕ್ಷತೆಗೆ ಅಪಾಯ ಉಂಟುಮಾಡುವ ಕೃತ್ಯ) ಮತ್ತು 353 (ಸಾರ್ವಜನಿಕ ಅಶಾಂತಿಗೆ ಕಾರಣವಾಗುವ ಹೇಳಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಚಾರಣೆಯಲ್ಲಿ ವೇಳೆ ವ್ಯಕ್ತಿ ತಂದೆ ಅಸ್ವಸ್ಥರಾಗಿದ್ದರಿಂದ ತುರ್ತಾಗಿ ವಿಮಾನಕ್ಕೆ ಹತ್ತಲು ಪ್ರಯತ್ನಿಸಿದ್ದಾಗಿ ತಿಳಿಸಿದ್ದಾನೆ. ಬಳಿಕ ಆತನಿಗೆ ಜಾಮೀನು ನೀಡಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



