ಚಪ್ಪಲಿ ಬಿಡಲ್ಲ: ಪಾದರಕ್ಷೆ ಧರಿಸಿಕೊಂಡೇ ಅಂಬೇಡ್ಕರ್ ಭಾವಚಿತ್ರಕ್ಕೆ ಬಾನು ಮುಷ್ತಾಕ್ ಪುಷ್ಪ ನಮನ!
ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಸಮಾವೇಶದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲು ಭಾನು ಮುಷ್ತಾಕ್ ಮುಂದಾದಾಗ ಸಂಘಟಕರು ಚಪ್ಪಲಿ ಬಿಟ್ಟು ಬರುವಂತೆ ಮನವಿ ಮಾಡಿದರು.

ಮಂಡ್ಯ: ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ। ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಸಾಹಿತಿ ಬಾನು ಮುಷ್ತಾಕ್ ಪುಷ್ಪ ನಮನ ಸಲ್ಲಿಸಿದ್ದು ವಿವಾದಕ್ಕೆ ತಿರುಗಿದೆ. ಚಪ್ಪಲಿ ಧರಿಸಿಕೊಂಡೇ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಸಮಾವೇಶದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲು ಬಾನು ಮುಷ್ತಾಕ್ ಮುಂದಾದಾಗ ಸಂಘಟಕರು ಚಪ್ಪಲಿ ಬಿಟ್ಟು ಬರುವಂತೆ ಮನವಿ ಮಾಡಿದರು.
ಅದಕ್ಕೆ ಬಾನು ಮುಷ್ತಾಕ್ ಒಪ್ಪಲಿಲ್ಲ. ಆದರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಪ್ಪಲಿ ಹೊಲೆಯುವುದು ನಮ್ಮ ವೃತ್ತಿ. ಚಪ್ಪಲಿ ನಮ್ಮ ಮನೆ ದೇವರು ಎಂದು ಸರ್ಮಥಿಸಿಕೊಂಡಿದ್ದಾರೆ. ಅದು ನಮ್ಮ ಅಸ್ಮಿತೆಯ ಸಂಕೇತ. ನಾವು ಚಪ್ಪಲಿ ಹೊಲಿಯುವವರು. ನಮಗೆ ಅದರ ಬಗ್ಗೆ ಅಪಾರ ಗೌರವವಿದೆ ಎಂದು ಸಮರ್ಥನೆ ನೀಡಿದರು.

ಧನ್ಯವಾದದೊಂದಿಗೆ ಹೀಗೊಂದು ಲಹರಿ: Dear ಉರಿಯಮ್ಮ/ಉರಿಯಪ್ಪನವರೇ...; ಭಾನು ಮುಷ್ತಾಕ್ ಹೀಗೆ ಬರೆದಿದ್ದು ಯಾರಿಗೆ?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


